ಚಿತ್ರದುರ್ಗ. ಫೆ.13 : ಮೊಳಕಾಲ್ಮೂರು ತಾಲ್ಲೂಕು ಜೆ.ಬಿ. ಹಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಸುರೇಶ್ ಅವರನ್ನು ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಸುರೇಶ್ ಅವರು ನಿಯುಕ್ತಿಗೊಳಿಸಿದ ಸ್ಥಳಕ್ಕೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೆ, ಒಬ್ಬ ಜವಾಬ್ದಾರಿಯುತ, ಸರ್ಕಾರಿ ನೌಕರರಾಗಿದ್ದುಕೊಂಡು, ಸರ್ಕಾರದ ಮತ್ತು ಮೇಲಾಧಿಕಾರಿಗಳ ಆದೇಶಗಳನ್ನು ಉಲ್ಲಂಘನೆ ಮಾಡುವ ಮೂಲಕ ಸರ್ಕಾರಿ ನೌಕರರ ವೃತ್ತಿಗೆ ತರವಲ್ಲದ ರೀತಿ ವರ್ತಿಸಿ, ನಿಯಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದ ಕಾರಣ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.
ಅಮಾನತು ಅವಧಿಯಲ್ಲಿ ಪ್ರಾಧಿಕಾರದ ಅನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಮತ್ತು ಅನ್ಯ ಉದ್ಯೋಗದಲ್ಲಿ ತೊಡಗುವಂತಿಲ್ಲ ಹಾಗೂ ನಿಯಮಾನುಸಾರ ಜೀವನಾಧಾರ ಭತ್ಯೆಗೆ ಅರ್ಹರಿರುತ್ತಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶದಲ್ಲಿ ತಿಳಿಸಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 13 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ನಿವಾಸಿ ಸುಮಿತ್ರಮ್ಮ (67 ವರ್ಷ) ಅವರು ಇಂದು…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 13 : ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮಾಜಿ ಚೇರ್ಮನ್ ಹಾಲಿ ಸದಸ್ಯ ಕೆ.ಅನ್ವರ್‍ಬಾಷರವರ ಮೇಲೆ…
ಚಿತ್ರದುರ್ಗ. ಫೆ.13: ನಗರದ ವಿ.ಪಿ. ಬಡಾವಣೆಯಲ್ಲಿರುವ ಜಿಲ್ಲಾ ತೋಟಗಾರಿಕೆ ಇಲಾಖೆ ಆವರಣದಲ್ಲಿ ಇದೇ ಫೆ.15 ರಿಂದ 17 ರವರೆಗೆ…
ಚಿತ್ರದುರ್ಗ, ಫೆ. 13 : ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು…
ಸುದ್ದಿಒನ್, ಹಿರಿಯೂರು, ಫೆಬ್ರವರಿ. 13 : ದಕ್ಷಿಣಕಾಶಿ ಎಂದೇ ಪ್ರಸಿದ್ದಿ ಪಡೆದಿರುವ ಹಿರಿಯೂರು ನಗರದ ಐತಿಹಾಸಿಕ ಶ್ರೀತೇರುಮಲ್ಲೇಶ್ವರ ಸ್ವಾಮಿಯ…
ಬೆಂಗಳೂರು: ಚಿನ್ನದ ದರದಲ್ಲಿ ಏರಿಳಿತ ಮುಂದುವರೆದಿದೆ. ಒಂದು ದಿನ ಏರಿಕೆಯಾದ್ರೆ ಮರು ದಿನವೇ ಏರಿಕೆಯಾಗುತ್ತಿದೆ. ನಿನ್ನೆಯಷ್ಟೇ 70 ರೂಪಾಯಿ ಅಷ್ಟು…