ಸುದ್ದಿಒನ್, ಚಿತ್ರದುರ್ಗ, ನವೆಂಬರ್.26 : ಕುಡಿಯಲು ಹಣ ಕೊಡಲಿಲ್ಲವೆಂದು ಮಗನೊಬ್ಬ ತಾಯಿಯನ್ನು ಹತ್ಯೆ ಮಾಡಿದ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ.
ಅಂಜಿನಮ್ಮ (58) ಕೊಲೆಯಾದ ದುರ್ದೈವಿ. ಶಿವಾರೆಡ್ಡಿ (37) ಕೊಲೆ ಮಾಡಿದ ಪಾಪಿ ಮಗ. ಆರೋಪಿ ಶಿವಾರೆಡ್ಡಿ ಕಳೆದ 10 ವರ್ಷಗಳಿಂದ ಮಧ್ಯವ್ಯಸನಿಯಾಗಿದ್ದ. ಪ್ರತಿನಿತ್ಯವೂ ಹಣಕ್ಕಾಗಿ ತಾಯಿಯೊಂದಿಗೆ ಜಗಳವಾಡುತ್ತಿದ್ದ. ನಿನ್ನೆ (ಶನಿವಾರ) ರಾತ್ರಿ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.
ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















