Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಳಕಾಲ್ಮೂರು : ದೇವಸ್ಥಾನದ ಹುಂಡಿ ಕಳವು ಮಾಡಿದ್ದ ಇಬ್ಬರು ಖದೀಮರ ಬಂಧನ : 32,750 ರೂ. ನಗದು, ಬೈಕ್ ವಶ

---Advertisement---

ಸುದ್ದಿಒನ್, ಮೊಳಕಾಲ್ಮೂರು, ಅಕ್ಟೋಬರ್. 29 :  ತಾಲೂಕಿನ ಕೆಳಗಿನಕಣಿವೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿ ಒಡೆದು ಹಣ ದೋಚಿದ್ದ ಇಬ್ಬರು ಆರೋಪಿಗಳನ್ನು ರಾಂಪುರ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.

ಬಂಧಿತರನ್ನು ಬಿ. ಬಂಗಾರಪ್ಪ (ತಂದೆ ಬಿ. ಮಲ್ಲಯ್ಯ) ಹಾಗೂ ಎಸ್. ಸಣ್ಣ ಪಾಲಯ್ಯ ಅಲಿಯಾಸ್ ಪಾಲಯ್ಯ (ತಂದೆ ಸೂರಲಿಂಗಪ್ಪ) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ₹32,750 ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ KA-35-EJ-2941 ನೋಂದಣಿ ಸಂಖ್ಯೆಯ ಮೋಟಾರ್ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಕಳೆದ ಆಗಸ್ಟ್ 25, 2026 ರಂದು ಕೆಳಗಿನಕಣಿವೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ಒಳನುಗ್ಗಿದ್ದ ಕಳ್ಳರು, ಹುಂಡಿಯಲ್ಲಿದ್ದ ಅಂದಾಜು 30 ರಿಂದ 40 ಸಾವಿರ ರೂಪಾಯಿ ನಗದನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಸಂಬಂಧ ರಾಂಪುರ ಪೊಲೀಸ್ ಠಾಣೆಯಲ್ಲಿ BNS-2023 ಕಾಯ್ದೆಯಡಿ ಪ್ರಕರಣ (ಕ್ರ.ಸಂ: 132/2026) ದಾಖಲಾಗಿತ್ತು.

ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕುಶಲ್ ಚೌಕ್ಷೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ. ಶಿವಕುಮಾರ್ ಆರ್., ಚಳ್ಳಕೆರೆ ಡಿವೈಎಸ್ಪಿ ಸತ್ಯನಾರಾಯಣ ರಾವ್ ಹಾಗೂ ಮೊಳಕಾಲ್ಮೂರು ಸಿಪಿಐ ಆರ್. ನಾಗರಾಜ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು.

ರಾಂಪುರ ಠಾಣೆಯ ಪಿಎಸ್ಐಗಳಾದ ಬಾಹುಬಲಿ ಎಂ.ಪಿ., ಲಕ್ಷ್ಮೀನಾರಾಯಣಪ್ಪ ಹಾಗೂ ಸಿಬ್ಬಂದಿ ಒಳಗೊಂಡ ತಂಡವು ಖಚಿತ ಮಾಹಿತಿ ಮತ್ತು ತಾಂತ್ರಿಕ ಆಧಾರದ ಮೇಲೆ ಅಕ್ಟೋಬರ್ 27ರಂದು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಆರೋಪಿಗಳು ದೇವಸ್ಥಾನದ ಬೀಗ ಮುರಿದು ಹುಂಡಿ ಹಣ ದೋಚಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಅಕ್ಟೋಬರ್ 28ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಕರಣ ಭೇದಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಷೆ ಶ್ಲಾಘಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now