Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇರಳಕ್ಕೆ ಮುಂಗಾರು ಎಂಟ್ರಿ ಮತ್ತೆ ತಡ; ‘ಸೂಪರ್ ಎಲ್ ನಿನೊ’ ಆತಂಕದಿಂದ ರೈತರಲ್ಲಿ ಚಿಂತೆ

---Advertisement---

ಭಾರತೀಯ ಹವಾಮಾನ ಇಲಾಖೆ ಮೇ 26ರಂದೇ ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಮೊದಲಿಗೆ ತಿಳಿಸಿತ್ತು. ಆದರೆ ಬಂಗಾಳ ಕೊಲ್ಲಿಯಲ್ಲಿ ಉಂಟಾದ ಹವಾಮಾನ ವೈಪರೀತ್ಯದ ಪರಿಣಾಮ ಈ ವರ್ಷ ಮುಂಗಾರು ಆಗಮನದಲ್ಲಿ ವಿಳಂಬವಾಗಲಿದೆ ಎಂದು ಇದೀಗ ಇಲಾಖೆ ಸ್ಪಷ್ಟಪಡಿಸಿದೆ.

ಸಾಮಾನ್ಯವಾಗಿ ಜೂನ್ 1ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುತ್ತದೆ. ಈ ಬಾರಿ ಆರು ದಿನಗಳ ಮುಂಚಿತವಾಗಿ ಮಳೆಗಾಲ ಆರಂಭವಾಗಬಹುದು ಎಂದು ಹವಾಮಾನ ಇಲಾಖೆ ಕೆಲವು ವಾರಗಳ ಹಿಂದೆ ಅಂದಾಜಿಸಿತ್ತು. ಆದರೆ ಈಗಿನ ಪರಿಸ್ಥಿತಿಯಲ್ಲಿ ಜೂನ್ 2 ಅಥವಾ 4ರಂದು ಮಾತ್ರ ಮಾನ್ಸೂನ್ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು India Meteorological Department ಮಾಹಿತಿ ನೀಡಿದೆ.

ಮುಂಗಾರು ಪ್ರವೇಶವನ್ನು ನಿರ್ಧರಿಸಲು ಹವಾಮಾನ ಇಲಾಖೆ ಕೆಲವು ಪ್ರಮುಖ ಮಾನದಂಡಗಳನ್ನು ಅನುಸರಿಸುತ್ತದೆ. ಕೇರಳದ 14 ಹವಾಮಾನ ಕೇಂದ್ರಗಳ ಪೈಕಿ ಕನಿಷ್ಠ ಶೇ.60 ಕೇಂದ್ರಗಳಲ್ಲಿ 2.5 ಮಿ.ಮೀ ಗಿಂತ ಹೆಚ್ಚು ಮಳೆಯಾಗಬೇಕು. ಜೊತೆಗೆ ಪಶ್ಚಿಮ ದಿಕ್ಕಿನಿಂದ ಬಲವಾದ ಗಾಳಿಯೂ ಬೀಸಬೇಕಾಗಿದೆ. ಆದರೆ ಪ್ರಸ್ತುತ ಹವಾಮಾನ ಬದಲಾವಣೆಗಳಿಂದ ಈ ಮಾನದಂಡಗಳು ಪೂರ್ಣವಾಗದ ಹಿನ್ನೆಲೆಯಲ್ಲಿ ಮುಂಗಾರು ವಿಳಂಬವಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.

ಇನ್ನೊಂದೆಡೆ, ಕೇರಳದಲ್ಲಿ ಅಧಿಕೃತವಾಗಿ ಮುಂಗಾರು ಪ್ರವೇಶವಾಗದಿದ್ದರೂ ಕೊಲ್ಲಂ, ಅಳಪ್ಪುಳ ಹಾಗೂ ಎರ್ನಾಕುಳಂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಬಾರಿ ‘ಎಲ್ ನಿನೊ’ ಪರಿಣಾಮದ ಬಗ್ಗೆ ಹವಾಮಾನ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾನ್ಯ ಎಲ್ ನಿನೊ ಅಲ್ಲ, ‘ಸೂಪರ್ ಎಲ್ ನಿನೊ’ ಪರಿಣಾಮ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಸರಾಸರಿಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಮಳೆ ಆಧಾರಿತ ಕೃಷಿ ನಡೆಸುವ ರೈತರಿಗೆ ಇದು ಸಂಕಷ್ಟ ತರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now