Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಂಗಾರು ಮಳೆ: ಮಳೆ ಹಾನಿ ತಗ್ಗಿಸಲು ಪೂರ್ವಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜೂನ್. 01) : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಪ್ರಸಕ್ತ ಮುಂಗಾರು ಮಳೆ ಹಾಗೂ ಚಂಡ ಮಾರುತಗಳ ಪರಿಣಾಮ ತಗ್ಗಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಲಹೆ, ಸೂಚನೆ ನೀಡಿದ್ದು, ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಉಂಟಾದಲ್ಲಿ ಸಂಭವಿಸಬಹುದಾದ ದುಷ್ಪಾರಿಣಾಮ ಸಮರ್ಥವಾಗಿ ಎದುರಿಸಲು ಹಾಗೂ ಹಾನಿ ತಗ್ಗಿಸಲು ಮುಂಗಾರು ಪೂರ್ವದಲ್ಲಿ ಅಗತ್ಯ ಪೂರ್ವ ಸಿದ್ಧತೆ ಕ್ರಮ ಕೈಗೊಳ್ಳಬೇಕು ಎಂದು ವಿವಿಧ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಸೂಚನೆ ನೀಡಿದ್ದಾರೆ.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಸರ್ಕಾರದಿಂದ ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಿರುವಂತೆ ಮುಂಗಾರು 2023 ಪೂರ್ವ ಸಿದ್ದತೆ ಕುರಿತು ನೀಡಿರುವ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಪಾಲಿಸಿ ಹಾಗೂ ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮ ತಗ್ಗಿಸಲು ಕಾರ್ಯೋನ್ಮುಖರಾಗಲು ಸೂಚಿಸಿದ್ದಾರೆ.

ಈ ವರ್ಷ ವಾಡಿಕೆ ಮಳೆಯ ಜೊತೆಗೆ ರಾಜ್ಯದ ಹಲವು ಭಾಗಗಳಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಮಾನ ಇಲಾಖೆ ಸೂಚನೆ ನೀಡಿದೆ. ಅತಿವೃಷ್ಠಿ ಸಂದರ್ಭದಲ್ಲಿ ಸಂಭವಿಸುವ ದುಷ್ಪರಿಣಾಮ ಹಾಗೂ ಹಾನಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಪೂರ್ವ ಸಿದ್ದತೆ ಕೈಗೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾರ್ಗದರ್ಶಿ ನಿಯಮ, ಜವಾಬ್ದಾರಿ ಹಾಗೂ ಸಿದ್ದತೆ ಸೂಚನೆಗಳನ್ನು ಬಿಡುಗಡೆ ಮಾಡಿದೆ.

ಕಂದಾಯ, ನಗರಾಭಿವೃದ್ಧಿ, ಲೋಕೋಪಯೋಗಿ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ಯ ಇಲಾಖೆ ಸೇರಿದಂತೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿನ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಗಾರು ಮಳೆ ಆರಂಭವಾಗುವ ಮುನ್ನವೇ ವಿಪತ್ತುಗಳಿಗೆ ತುತ್ತಾಗುವ ಪ್ರದೇಶಗಳನ್ನು ಗುರುತಿಸಿ, ಸಮುದಾಯಗಳಲ್ಲಿ ಅರಿವು ಮೂಡಿಸಬೇಕು.

ಜಿಲ್ಲಾಧಿಕಾರಿಗಳು  ವಿಪತ್ತು ನಿರ್ವಹಣಾ ಕೇಂದ್ರಗಳನ್ನು ಸ್ಥಾಪಿಸಿ 24*7 ಕಾರ್ಯನಿರ್ವಹಿಸುವಂತೆ ಮಾಡಬೇಕು.

ವಿಪತ್ತು ನಿರ್ವಹಣೆಯಲ್ಲಿ ತೊಡಗಿರುವ ಎಲ್ಲಾ ಹಂತದ ಅಧಿಕಾರಿಗಳ ವಿಳಾಸ, ದೂರವಾಣಿ ಹಾಗೂ ಮೊಬೈಲ್ ಸಂಖ್ಯೆಗಳನ್ನು ಸಂಗ್ರಹಿಸಬೇಕು. ವಿಪತ್ತು ಎದುರಾದ ಸಂದರ್ಭದಲ್ಲಿ ಮಾಹಿತಿ ಸಂವಹನಕ್ಕಾಗಿ ಅಧಿಕಾರಿಗಳು ಹಾಗೂ ನೌಕರರ ವಾಟ್ಸ್ ಆಪ್ ಗ್ರೂಪ್ ರಚನೆ ಮಾಡಬೇಕು.

ಎಲ್ಲಾ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕರ್ತವ್ಯ ಹಾಗೂ ಜವಬ್ದಾರಿಗಳನ್ನು ಮನದಟ್ಟು ಮಾಡುವುದು. ಮೊಬೈಲ್ ಟೆಲಿಕಾಂ ಸೇವಾ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಹವಮಾನ ಕುರಿತಾಗಿ ರೆಡಿಯೋ,ದೃಶ್ಯ ಹಾಗೂ ಮುದ್ರಣ ಮಾಧ್ಯಮದಲ್ಲಿ ಸಾರ್ವಜನಿಕರಿಗೆ ಮಾಹಿತಿ ಪ್ರಚುರ ಪಡಿಸಬೇಕು. ಗ್ರಾಮಗಳಲ್ಲಿ ಡಂಗೂರ ಸಾರಬೇಕು.

ಸಾರ್ವಜನಿಕರಿಗೆ ಪ್ರಕೃತಿ ವಿಕೋಪದ ಮಾಹಿತಿ:  ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.

ಹವಾಮಾನ ಮುನ್ಸೂಚನೆ ಹಾಗೂ ಮುನ್ನೆಚರಿಕೆಗಳನ್ನು ಆಧರಿಸಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಾರ್ವತ್ರಿಕ ಮುನ್ಸೂಚನಾ ಕ್ರಮಗಳನ್ನು ಸಾರ್ವಜನಿಕರ ಮೊಬೈಲ್‍ಗಳಿಗೆ ರವಾನಿಸಲಿದೆ.

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಡಿಯಲ್ಲಿ ಚಾಲ್ತಿಯಲ್ಲಿರುವ ವರುಣ ಮಿತ್ರ ಸಹಾಯವಾಣಿ 9243345433 ಮೂಲಕ ಸಾರ್ವಜನಿಕರು ಅಗತ್ಯ ಮಾಹಿತಿ ಪಡೆಯಬಹುದು. ಇದರೊಂದಿಗೆ “Sidilu app”  ಹಾಗೂ “Damini app”  ಮಳೆ ಮುನ್ಸೂಚನೆಗಳನ್ನು 30 ನಿಮಿಷದ ಮುಂಚಯೇ ಪಡೆದುಕೊಳ್ಳಬಹದು.

ಇದರೊಂದಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ರೂಪಿಸಿರುವ “Sacht app” ಮಾಹಿತಿ ಪಡೆದುಕೊಳ್ಳಬಹುದು.

ತುರ್ತು ಸ್ಪಂದನಾ ಪಡೆ ರಚನೆ : ಜಿಲ್ಲೆಗಳಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ನಾಗರೀಕ ರಕ್ಷಣಾ ದಳ, ಗೃಹ ರಕ್ಷಕ ದಳ ಹಾಗೂ ಆಪದ್ ಮಿತ್ರ ಅಡಿ ತರಬೇತಿ ಪಡೆದ ಸ್ವಯಂ ಸೇವಕರನ್ನು ಒಳಗೊಂಡ ತುರ್ತು ಸಂದನಾ ಪಡೆಗಳ ಸದಾ ಜಾಗೃತಿಯಲ್ಲಿ ಇಡಬೇಕು. ಆಪತ್ತು ಸಂದರ್ಭದಲ್ಲಿ ಜಿಲ್ಲೆಯಲ್ಲಿ ಲಭ್ಯ ಇರುವ ಎಲ್ಲಾ ರಕ್ಷಣಾ ಸಲಕರಣೆಗಳ ಮಾಹಿತಿ ಕ್ರೂಡೀಕರಿಸಿಕೊಳ್ಳಬೇಕು. ಅಗತ್ಯ ಸಂದರ್ಭದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ಆಪತ್ತು ಎದುರಾಗುವ ಪ್ರದೇಶಗಳಿಗೆ ನಿಯೋಜಿಸಲಾಗುವುದು.

ಪರಿಹಾರ ಮತ್ತು ಪುನರ್ವಸತಿ : ಪ್ರಕೃತಿ ವಿಕೋಪಕ್ಕೆ ಸಿಲುಕಿದವರನ್ನು ರಕ್ಷಣೆ ಮಾಡಿ ಆಶ್ರಯ ಒದಗಿಸಬೇಕು. ಇದಕ್ಕಾಗಿ ಕಾಳಜಿ ಕೇಂದ್ರಗಳನ್ನು ತೆರಯಲಾಗುವುದು. ಕಾಳಜಿ ಕೇಂದ್ರಗಳನ್ನು ನಿಯಮಾನುಸಾರ ಆಶ್ರಿತರಿಗೆ ಆಹಾರ ಹಾಗೂ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಾಗುವುದು.

ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದವರ ಮಾಹಿತಿ ಹಾಗೂ ದತ್ತಾಂಶಗಳನ್ನು ಸಂಗ್ರಹಿಸಲಾಗುವದು. ಇದಕ್ಕಾಗಿ ಅಗತ್ಯ ಆಹಾರ ದಿನಸಿಗಳ ಸಮರ್ಪಕ ದಾಸ್ತಾನು ಮಾಡಲು ಕ್ರಮ ಕೈಗೊಳ್ಳಲಾಗುವುದು.

ಒತ್ತುವರಿ ತೆರವು ಹಾಗೂ ಚಂಡಿಗಳ ಸ್ವಚ್ಛತೆ : ನದಿ, ಹಳ್ಳ, ಕೆರೆ, ನಾಲೆಗಳನ್ನು ಒತ್ತುವರಿಯನ್ನು ತೆರವು ಮಾಡಿ ಮಳೆಗಾಲ ಆರಂಭಕ್ಕೆ ಮುಂಚಿತವಾಗಿಯೇ ಹೂಳು ಎತ್ತಿ ಸ್ವಚ್ಚಗೊಳಿಸಲಾಗುವುದು. ಪ್ರವಾಹದ ಸಂದರ್ಭದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗದಂತೆ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗುವುದು.

ಇದರೊಂದಿಗೆ ಪ್ರವಾಹ ಬಂದು ನಿಂತ ನೀರನ್ನು ಹೊರಹಾಕಲು ಪಂಪಸೆಟ್‍ಗಳನ್ನು ಸಜ್ಜುಗೊಳಿಸಲಾಗುವುದು.
ವಿದ್ಯುತ್, ಆರೋಗ್ಯ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುವುದು. ಇದರೊಂದಿಗೆ ಪಶು ಇಲಾಖೆಯಿಂದ ಜಾನುವಾರುಗಳಲ್ಲಿ ಸಾಂಕ್ರಮಿಕ ರೋಗಗಳು ಹರಡದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!