Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ ಜಿಲ್ಲೆಯ ರೈತರಿಗೆ ಮುಂಗಾರು ಹಂಗಾಮಿನ ಬೆಳೆ ವಿಮೆ ಹಣ ಬಿಡುಗಡೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

---Advertisement---

ಚಿತ್ರದುರ್ಗ. ಜನವರಿ.04: 2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ  ಹವಾಮಾನಾಧಾರಿತ ಬೆಳೆವಿಮೆ  ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ 3584 ರೈತರಿಗೆ ರೂ.2333.01 ಲಕ್ಷ ವಿಮಾ ಮೊತ್ತವನ್ನು ಕ್ಷೇಮಾ ಇನ್ಸುರೆನ್ಸ್ ಕಂಪನಿಯರು ವಿಮಾದಾರರ ಖಾತೆಗೆ ಬಿಡುಗಡೆ  ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನಧಾರಿತ ಬೆಳೆವಿಮೆ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಅಡಿಕೆ, ಮಾವು ಮತ್ತು ದಾಳಿಂಬೆ ಬೆಳೆಗೆ ಜಿಲ್ಲೆಯ 3648 ರೈತರು ರೂ.226.99 ಲಕ್ಷ ಪ್ರೀಮಿಯಂ ಪಾವತಿಸಿ ನೋಂದಾಯಿಸಿಕೊಂಡಿದ್ದು, ಈ ಪೈಕಿ 3584 ರೈತರಿಗೆ ರೂ.2333.01 ಲಕ್ಷ ವಿಮಾ ಮೊತ್ತವನ್ನು ಕ್ಷೇಮಾ ಇನ್ಸುರೆನ್ಸ್ ಕಂಪನಿಯರು ಜಿಲ್ಲೆ ಎಲ್ಲಾ ವಿಮಾದಾರರ ಖಾತೆಗೆ ಬಿಡುಗಡೆ ಮಾಡಿರುತ್ತಾರೆ. ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಸಹಕರಿಸಿದ ಜಿಲ್ಲೆಯ ಎಲ್ಲ ರೈತರಿಗೆ ಅಭಿನಂದನೆ ಸಲ್ಲಿಸುತ್ತಾ, ಮುಂದಿನ ದಿನಗಳಲ್ಲಿ ಈ ಯೋಜನೆ ಅನುಷ್ಟಾನ ಮಾಡಲು ಸಹಕರಿಸಲು ಕೋರಿದ್ದಾರೆ.

 

ಮುಂದಿನ ವರ್ಷಗಳಲ್ಲಿ ಈ ಯೋಜನೆಯಡಿ ನೋಂದಾಯಿಸಿಕೊಳ್ಳುವ ರೈತರು ಯೋಜನೆಯ ಸದುಪಯೋಗ ಪಡೆಯಲು ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಕಡ್ಡಾಯವಾಗಿ ಬೆಳೆಯನ್ನು ಇಂದೀಕರಿಸಬೇಕು ಹಾಗೂ ಹಿಂದಿನ 2 ವರ್ಷಗಳಲ್ಲಿ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಕಡ್ಡಾಯವಾಗಿ ಬೆಳೆಯನ್ನು ನೊಂದಾಯಿಸಿಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...