Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಗಸ್ಟ್ 13ರಿಂದ ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನ: 10 ದಿನಗಳ ಕಾಲ ಜರುಗಲಿದೆ ಕಲಾಪ

---Advertisement---

ಬೆಂಗಳೂರು.ಜುಲೈ.29: ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನಕ್ಕೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಬರುವ ಆಗಸ್ಟ್ 13ರಿಂದ 27ರವರೆಗೆ ಒಟ್ಟು 10 ದಿನಗಳ ಕಾಲ ಉಭಯ ಸದನಗಳ ಕಲಾಪ ನಡೆಸಲು ತೀರ್ಮಾನಿಸಲಾಗಿದ್ದು, ಸಂವಿಧಾನದ 174ನೇ ವಿಧಿಯಡಿ ನೀಡಿರುವ ಅಧಿಕಾರ ಬಳಸಿ ರಾಜ್ಯಪಾಲರು ಕಲಾಪ ಕರೆದು ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 15, 16, 22, 23 ಹಾಗೂ 26ರ ಸರ್ಕಾರಿ ರಜಾದಿನಗಳನ್ನು ಹೊರತುಪಡಿಸಿ, ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪಗಳು ಆರಂಭವಾಗಲಿವೆ.

ಸಂಪುಟ ವಿಸ್ತರಣೆಯ ಪ್ರಕ್ರಿಯೆ ಕಾರಣಕ್ಕೆ ಈ ಮೊದಲು ಆಗಸ್ಟ್ 6ರಿಂದಲೇ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿತ್ತು. ಆದರೆ ಸಂಪುಟ ಪುನಾರಚನೆ ಕೊಂಚ ವಿಳಂಬವಾದ ಹಿನ್ನೆಲೆಯಲ್ಲಿ ಅಧಿವೇಶನವನ್ನು ಒಂದು ವಾರ ತಡವಾಗಿ ಆರಂಭಿಸಲಾಗುತ್ತಿದೆ. ಶೀಘ್ರದಲ್ಲೇ ಸಂಪುಟ ವಿಸ್ತರಣೆ ಪೂರ್ಣಗೊಳ್ಳಲಿದ್ದು, ನೂತನವಾಗಿ ಪ್ರಮಾಣವಚನ ಸ್ವೀಕರಿಸುವ ಸಚಿವರು ಈ ಬಾರಿಯ ಕಲಾಪದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ.

ಈ ಬಾರಿಯ ಅಧಿವೇಶನದಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಭಾರಿ ಜಟಾಪಟಿ ನಡೆಯುವ ಸಾಧ್ಯತೆಯಿದೆ. ಬಿಡದಿ ಟೌನ್‌ಶಿಪ್‌ ಯೋಜನೆ, ಕೆಪಿಎಸ್‌ಸಿ ನೇಮಕಾತಿ ಅಕ್ರಮ, ರಾಜ್ಯದ ಹಲವೆಡೆ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿ, ರೈತರ ಸಮಸ್ಯೆಗಳು, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಮತ್ತು 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ ವಿಚಾರಗಳನ್ನು ಮುನ್ನೆಲೆಗೆ ತಂದು ಸರ್ಕಾರವನ್ನು ತೊಳೆಯಲು ವಿಪಕ್ಷಗಳು ಸಜ್ಜಾಗಿವೆ. ಮತ್ತೊಂದೆಡೆ ಪ್ರತಿಪಕ್ಷಗಳ ವಾಗ್ದಾಳಿಗೆ ತಿರುಗೇಟು ನೀಡಲು ಆರ್‌ಎಸ್‌ಎಸ್ ನೋಂದಣಿ ವಿವಾದ, ನೀಟ್ ಗೊಂದಲ ಹಾಗೂ ರಾಮಮಂದಿರ ದೇಣಿಗೆ ಕಳವು ಪ್ರಕರಣಗಳನ್ನು ಪ್ರಮುಖ ಅಸ್ತ್ರಗಳನ್ನಾಗಿ ಬಳಸಿಕೊಳ್ಳಲು ಆಡಳಿತ ಪಕ್ಷ ತಂತ್ರ ಹೆಣೆದಿದೆ.

Join WhatsApp

Join Now

Join Telegram

Join Now