Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇನ್ನೆರಡೇ ದಿನದಲ್ಲಿ ಕೇರಳಕ್ಕೆ ಮುಂಗಾರು ಎಂಟ್ರಿ : ಹವಾಮಾನ ಇಲಾಖೆ ಮುನ್ಸೂಚನೆ

---Advertisement---

ಸುದ್ದಿಒನ್,ನವದೆಹಲಿ,ಜೂನ್.2: ದೇಶದಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಮುಂಗಾರು ಮಳೆಯ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನು ಎರಡರಿಂದ ಮೂರು ದಿನಗಳ ಒಳಗಾಗಿ ನೈರುತ್ಯ ಮುಂಗಾರು ಮಾರುತಗಳು ಕೇರಳ ಕರಾವಳಿಯನ್ನು ತಲುಪಲಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಸಾಮಾನ್ಯವಾಗಿ ಪ್ರತಿ ವರ್ಷ ಜೂನ್ 1 ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶಿಸುವುದು ವಾಡಿಕೆ. ಆದರೆ ಈ ಬಾರಿ ಹವಾಮಾನದಲ್ಲಿನ ಬದಲಾವಣೆಗಳಿಂದಾಗಿ ಮೇ 26 ಕ್ಕೇ ಮಳೆಗಾಲ ಆರಂಭವಾಗಬಹುದು ಎಂದು ಈ ಹಿಂದೆ ಅಂದಾಜಿಸಲಾಗಿತ್ತು. ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ನಿರೀಕ್ಷಿತ ಸಮಯಕ್ಕಿಂತ ಎರಡು-ಮೂರು ದಿನಗಳು ತಡವಾಗಿ ಮಳೆ ಮಾರುತಗಳು ಭಾರತದ ನೆಲಕ್ಕೆ ಕಾಲಿಡಲಿವೆ.

ಅನುಕೂಲಕರ ವಾತಾವರಣ: ಸದ್ಯ ಅರಬ್ಬಿ ಸಮುದ್ರದ ನೈರುತ್ಯ ಮತ್ತು ಆಗ್ನೇಯ ಭಾಗಗಳು, ಲಕ್ಷದ್ವೀಪ ಹಾಗೂ ತಮಿಳುನಾಡಿನ ಕೆಲವು ಪ್ರದೇಶಗಳಲ್ಲಿ ಮುಂಗಾರು ಮಾರುತಗಳು ಮುನ್ನಡೆಯಲು ಪೂರಕವಾದ ವಾತಾವರಣ ನಿರ್ಮಾಣವಾಗಿದೆ.

ಕೇರಳಕ್ಕೆ ಮುಂಗಾರು ಪ್ರವೇಶಿಸುತ್ತಿದ್ದಂತೆ, ಮುಂದಿನ ಕೆಲವೇ ದಿನಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಿಗೂ ಮಳೆ ಮಾರುತಗಳು ವ್ಯಾಪಿಸಲಿವೆ.ಆರಂಭದಲ್ಲಿ ಮೇ ಕೊನೆಯ ವಾರದಲ್ಲೇ ಮಳೆ ಬರಬಹುದು ಎಂದು ಅಂದಾಜಿಸಲಾಗಿದ್ದರೂ, ಈಗಿನ ಹವಾಮಾನ ವೈಪರೀತ್ಯದಿಂದಾಗಿ ಜೂನ್ ಮೊದಲ ವಾರದ ಆರಂಭದಲ್ಲೇ ಮುಂಗಾರು ಅಧಿಕೃತವಾಗಿ ಆರಂಭವಾಗುವುದು ಖಚಿತವಾಗಿದೆ. ಇದು ಕೃಷಿ ಚಟುವಟಿಕೆಗಳಿಗೆ ಗ್ರೀನ್ ಸಿಗ್ನಲ್ ನೀಡಿದಂತಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now