Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದಿನಿಂದ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕು; ಜೂನ್ 23 ರವರೆಗೆ ವ್ಯಾಪಕ ಮಳೆ ಎಚ್ಚರಿಕೆ!

---Advertisement---

ಬೆಂಗಳೂರು.ಜೂನ್.18: ರಾಜ್ಯದಲ್ಲಿ ಇಂದಿನಿಂದ ಜೂನ್ 23 ರವರೆಗೆ ಮುಂಗಾರು ಮಳೆ ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ. ಕೆಲವು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ರೈತರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇಂದು (ಜೂನ್ 18) ಮತ್ತು ನಾಳೆ (ಜೂನ್ 19) ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಹಾಸನ, ಕೊಡಗು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಕೆಲವೆಡೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ನಿರೀಕ್ಷೆಯಿದೆ. ಇದರೊಂದಿಗೆ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲೂ ಚದುರಿದ ಮಳೆಯಾಗಲಿದೆ.

ಜೂನ್ 20 ಮತ್ತು 21 ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಉತ್ತಮ ಮಳೆಯಾಗಬಹುದು. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ.

ಜೂನ್ 22 ಮತ್ತು 23 ರಂದು ಮುಂಗಾರು ಮತ್ತಷ್ಟು ಬಲಗೊಳ್ಳಲಿದ್ದು, ಕರಾವಳಿ ಕರ್ನಾಟಕದ ಅನೇಕ ಕಡೆಗಳಲ್ಲಿ ನಿರಂತರ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಹಾಗೂ ಸಮುದ್ರ ತೀರ ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಇದೇ ಅವಧಿಯಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Join WhatsApp

Join Now

Join Telegram

Join Now