Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಕೇಸ್ : 2 ತಿಂಗಳಲ್ಲಿ ತನಿಖೆ ಮುಗಿಸುವಂತೆ ಕೋರ್ಟ್ ಆದೇಶ..!

---Advertisement---

ಬೆಂಗಳೂರು: ಮೂಡಾ ಕೇಸಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಧರ್ಮಪತ್ನಿ ಪಾರ್ವತಿ ಅವರಿಗೂ ಇದರಿಂದ ಸಾಕಷ್ಟು ಸಮಸ್ಯೆ ಎದುರಾಗಿತ್ತು. ಬಳಿಕ ಎಲ್ಲವೂ ಸಮಾಧಾನದ ಹಂತ ತಲುಪಿತ್ತು. ಈಗ ಕೋರ್ಟ್ ಈ ಕೇಸ್ ಗೆ ಸಂಬಂಧಿಸಿದಂತೆ ತನಿಖೆ ಮುಗಿಸುವುದಕ್ಕೆ ಡೆಡ್ಲೈನ್ ನೀಡಿದೆ. ಇನ್ನು ಎರಡು ತಿಂಗಳ ಒಳಗೆ ತನಿಖೆ ಮುಗಿಸಿ, ವರದಿ ಒಪ್ಪಿಸುವುದಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ.

ಮೂಡಾ ಕೇಸ್ ಗೆ ಸಂಬಂಧಿಸಿದಂತೆ ಕಳೆದ 6 ತಿಂಗಳಿನಿಂದ ತನಿಖೆಯಲ್ಲಿ ಯಾವುದೇ ರೀತಿಯ ಪ್ರಗತಿ ಕಂಡಿಲ್ಲ. ಈ ಹಿನ್ನೆಲೆ ಅರ್ಜಿದಾರರು ಬಿ ರಿಪೋರ್ಟ್ ಸಲ್ಲಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿ, ಇಂದಿಗೆ ಆದೇಶ ಕಾಯ್ದಿರಿಸಿತ್ತು. ಆದೇಶದಲ್ಲಿ ಎರಡು ತಿಂಗಳ ಒಳಗಾಗಿ ತನಿಖೆಯನ್ನು ಸಂಪೂರ್ಣಗೊಳಿಸಿ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಬೇಕು. ಹೆಚ್ಚುವರಿಯಾಗಿ ಕಾಲಾವಕಾಶ ಕೋರುವಂತೆ ಇಲ್ಲ ಎಂದು ನ್ಯಾಯಾಲಯ ಸೂಚನೆ ನೀಡಿದೆ. ಲೋಕಾಯುಕ್ತ ಪೊಲೀಸರು ತನಿಖೆಯ ನೆಪದಲ್ಲಿ ಕಾಲ ಹರಣ ಮಾಡುತ್ತಲೇ ಇದ್ದಾರೆ. ಹೀಗಾಗಿ ಬಿ ರಿಪೋರ್ಟ್ ಸಲ್ಲಿಕೆ ಮಾಡಲು ತೀರ್ಮಾನ ಮಾಡುವಂತೆ ಅರ್ಜಿ ಸಲ್ಲಿಸಲಾಗಿತ್ತು.

ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಲಯ ನವೆಂಬರ್ 15ಕ್ಕೆ ವಿಚಾರಣೆ ಮುಂದೂಡಿದೆ. ತನಿಖಾಧಿಕಾರಿ ಬದಲಾವಣೆ ಮಾಡುವಂತೆ ಕೋರಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಾಲಯ ಇದೇ ವೇಳೆ ವಜಾ ಮಾಡಿದೆ. ಇಂದು ಆದೇಶ ಮಾಡುವ ನಿರೀಕ್ಷೆ ಇತ್ತು. ನ್ಯಾಯಾಲಯ ತನಿಖಾಧಿಕಾರಿ ಬದಲಾವಣೆ ಮಾಡಲು ಕೋರಿದ್ದ ಅರ್ಜಿ ವಜಾ ಮಾಡಿದೆ ಎಂದು ಸ್ನೇಹಮಯಿ ಕೃಷ್ಣ ಬೇಸರ ಹೊರ ಹಾಕಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...