Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಕೇಸ್ : ಮಾಜಿ ಆಯುಕ್ತರ ಜಾಮೀನು ಅರ್ಜಿ ವಜಾ, ಎಷ್ಟು ದಿನ ಕಸ್ಟಡಿ..?

---Advertisement---

 

ಮೈಸೂರು: ಮೂಡಾ ಹಗರಣ ಕೇಸ್ ನಲ್ಲಿ ಈಗಾಗಿ ಇಡಿ ಅಧಿಕಾರಿಗಳು ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಬಂಧಿಸಿದೆ. ಇಂದು ಕೋರ್ಟ್ ಮುಂದೆ ಹಾಜರು ಪಡಿಸಿತ್ತು. ಈ ವೇಳೆ ಮಾಜಿ ಆಯುಕ್ತ ದಿನೇಶ್ ಕುಮಾರ್, ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದ್ರೆ ಕೋರ್ಟ್ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಈ ಮೂಲಕ ದಿನೇಶ್ ಕುಮಾರ್ ಪೊಲೀಸ್ ಕಸ್ಟಡಿಯಲ್ಲಿಯೇ ಇರಲಿದ್ದಾರೆ. 9 ದಿನಗಳ ಕಾಲ ಕಸ್ಟಡಿಗೆ ನೀಡಿ ಜನಪ್ರತಿನಿಧಿಗಳ ನ್ಯಾಯಲಯವು ಆದೇಶ ನೀಡಿದೆ.

ಒಂದು ವರ್ಷದಿಂದ ಸುಮ್ಮನಿದ್ದ ಇಡಿ ಅಧಿಕಾರಿಗಳು ಈಗ ತನಿಖೆಗೆ ದಿನೇಶ್ ಬೇಕು ಎನ್ನುತ್ತಿದ್ದಾರೆ. ಇಷ್ಟು ದಿನ ಬಂಧನ ಮಾಡದೇ ಇದ್ದವರನ್ನು ಈಗ ಬಂಧಿಸಿದ್ದು ಯಾಕೆ..? ಈಗಾಗಲೇ ಬ್ಯಾಂಕ್ ವಿವರಗಳನ್ನು ಎಲ್ಲವನ್ನು ನೀಡಿದ್ದು, ಈಗ ಮತ್ತೆ ಕಸ್ಟಡಿಗೆ ಕೇಳುವುದು ಸರಿಯಲ್ಲ. ನಮ್ಮ ಕಕ್ಷಿದಾರರು ಅಸ್ತಮಾ ಸೇರಿದಂತೆ ಕೆಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ದಿನೇಶ್ ಕುಮಾರ್ ಪರ ವಕೀಲರು ಕೋರ್ಟ್ ಗೆ ಮನವಿ ಮಾಡಿದರು. ಅಷ್ಟೇ ಅಲ್ಲ ದೆಹಲಿಯ ಮಾಜಿ ಸಿಎಂ ಕೇಜ್ರಿವಾಲ್ ಅವರಿಗೆ ನೀಡಿದಂತೆ ಮಧ್ಯಂತರ ಜಾಮೀನು ನೀಡಬೇಕೆಂದು ಅರ್ಜಿ ಸಲ್ಲಿಕೆಯಲ್ಲಿ ಉಲ್ಲೇಖ ಮಾಡಿದ್ದರು.

ಅದಕ್ಕ ಉತ್ತರಿಸಿರುವ ಜಡ್ಜ್, ದಿನೇಶ್ ಕುಮಾರ್ ರಾಜಕಾರಣಿ ಅಲ್ಲ. ಮೂಡಾ ಪ್ರಕರಣದಲ್ಲಿ ಈ ಅಂಶವನ್ನು ಪ್ರಸ್ತಾಪ ಮಾಡುವ ಅಗತ್ಯವಿಲ್ಲ ಎಂಬ ಅಭಿಪ್ರಾಯ ಪಟ್ಟಿದೆ. ಹಾಗೇ ಇಡಿ ಪರ ವಕೀಲರು ಇನ್ನಷ್ಟು ದಿನ ಕಸ್ಟಡಿಗೆ ಬೇಕಾಗಿದೆ ಎಂದು ಮನವಿ ಮಾಡಿದರು. ವಾದ ಪ್ರತಿ ವಾದ ಆಲಿಸಿದ ಜನಪ್ರತಿನಿಧಿಗಳ ನ್ಯಾಯಾಲಯವು ಒಂಭತ್ತು ದಿನಗಳ ಕಾಲ ದಿನೇಶ್ ಕುಮಾರ್ ಅವರನ್ನು ಕಸ್ಟಡಿಗೆ ನೀಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now