ಚಿತ್ರದುರ್ಗ. ಅ.29:ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಈಚೆಗೆ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಚಿತ್ರದುರ್ಗ ತಾಲ್ಲೂಕಿನ ಗೂಳಯ್ಯನಹಟ್ಟಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪ್ರತ್ಯುಷ ಅವರು ಬಾಲಕಿಯರ ವಿಭಾಗದ 100 ಮೀ ಹರ್ಡ್‍ಲ್ಸ್‍ನಲ್ಲಿ ಪ್ರಥಮ ಹಾಗೂ 400 ಮೀ ಹರ್ಡ್‍ಲ್ಸ್‍ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಉಪವಿಭಾಗಾಧಿಕಾರಿ ಮಹಿಬೂಬ್ ಜೀಲಾನಿ ಖುರೇಷಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ವಸತಿ ಶಾಲೆಯ ಪ್ರಾಂಶುಪಾಲ ಎನ್.ಮಂಜುನಾಥ ರೆಡ್ಡಿ, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










