ಬೆಂಗಳೂರು: ರಾಜಕೀಯದಲ್ಲಿ ಕುಮಾರಸ್ವಾಮಿಗಿಂತ ನನಗೆ ಹೆಚ್ಚಿನ ಅನುಭವವಿದೆ. ಅವರಿಗಿಂತ ನಾನೇ ಉತ್ತಮ ಎಂಬ ಮಾತನ್ನ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಾನು ಸಿಎಂ ಆಗದೆ ಇರಬಹುದು ಆದರೆ ಅವರಿಗಿಂತ ಹೆಚ್ಚಿನ ಅನುಭವ ಇದೆ ಎಂದು ತಿರುಗೇಟು ನೀಡಿದ್ದಾರೆ. ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆಗೆ ನಡೆಅಇದ ಅಭೆಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರ ಬಗ್ಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು.
ನಾನು ಬಹಳ ಕಾಲ ಸಚಿವನಾಗಿ ಕೆಲಸ ಮಾಡಿದ್ದೇನೆ.ಆಡಳಿತ ಹೇಗೆ ಮಾಡಬೇಕು, ಯಾರ ಜೊತೆಗೆ ಸಭೆ ಮಾಡಬೇಕು, ಮಾಡಬಾರದು ಎಂಬುದು ನನಗೆ ಚೆನ್ನಾಗಿಯೇ ಗೊತ್ತಿದೆ. ಎಲ್ಲಾ ಪಕ್ಷಗಳೂ ರಾಜಕಾರಣವನ್ನು ಪಕ್ಕಕ್ಕಿಟ್ಟು, ನಮ್ಮ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲು ಒಗ್ಗಟ್ಟಾಗಿ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕೋಣ. ಇತ್ತೀಚೆಗೆ ನಾನು ದೆಹಲಿಗೆ ಹೋಗಿ ಬೇಡ್ತಿ ಹಾಗೂ ವರದಾ ನದಿ ಜೋಡಣೆ ವಿಚಾರದಲ್ಲಿ ಒಪ್ಪಂದಕ್ಕೆ ಸಹಿ ಹಾಕಿ ಬಂದಿದ್ದೇನೆ. ಬೊಮ್ಮಾಯಿ ಅವರ ಮುಂದಾಳತ್ವದಲ್ಲಿ ಪ್ರಧಾನಮಂತ್ರಿಗಳ ಭೇಟಿಗೆ ಸಮಯ ನಿಗದಿ ಮಾಡಿ, ನಾವೂ ಬರುತ್ತೇವೆ. ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸುವ ಬಗ್ಗೆ ಮನವಿ ಮಾಡೋಣಾ. ಅಗತ್ಯವಿದ್ದರೆ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಹಿಂಪಡೆಯೋಣಾ ಎಂದರು.
ಇದೆ ವೇಳೆ ಮಹದಾಯಿ ನ್ಯಾಯಾಧೀಕರಣ ತೀರ್ಪಿನ ಅನ್ವಯ ನೀರಿನ ಬಳಕೆಗೆ ಕೇಂದ್ರ ಸರ್ಕಾರದ ಅರಣ್ಯ ಇಲಾಖೆಯಿಂದ ಒಪ್ಪಿಗೆ ಸಿಕ್ಕರೆ ನೀವು ಮಾಡಿಕೊಂಡು ಬಂದಿರುವ ಹೋರಾಟಕ್ಕೆ ಮುಕ್ತಿ ಸಿಗುತ್ತದೆ. ಈ ಯೋಜನೆ ಸಂಬಂಧ ನಾವು ಈಗಾಗಲೇ ಟೆಂಡರ್ ಕರೆದಿದ್ದೇವೆ. ಗೋವಾ ರಾಜ್ಯದ ರಾಜಕಾರಣ ಬದಿಗಿಟ್ಟು ನಮ್ಮ ರಾಜ್ಯದ ಶಕ್ತಿಯನ್ನು ಪ್ರದರ್ಶಿಸಿ, ರೈತರು ಹಾಗೂ ಜನರ ಬದುಕಿನ ಬಗ್ಗೆ ಆಲೋಚಿಸೋಣ ಎಂದು ಕರೆ ನೀಡಿದ್ದಾರೆ.















