ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ : ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಗರದ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎರಡು ದಿನಗಳ “ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಕ್ಕೆ ಸರ್ಕಾರದಿಂದ  ಹೆಚ್ಚಿನ ಅನುದಾನ ಕೊಡುವುದಿಲ್ಲ. ಈ ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚಿಸಿದ್ದು, ಶಿಕ್ಷಣಕ್ಕೆ ಪೂರಕವಾಗಿ ಕಲೆ ಮತ್ತು ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನಕ್ಕಾಗಿ ಪ್ರಸ್ತಾವ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ದೊರೆಯುವ ಸಾಧ್ಯತೆ ಇದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಅತಿ ಹೆಚ್ಚು ಸಂಸ್ಕøತಿ, ಕಲೆ, ವಿಭಿನ್ನವಾದ ಭಾಷೆ ಇದ್ದರೂ ಒಂದೇ ನೆಲದಲ್ಲಿ ಬಾಳುವ ದೇಶ ಭಾರತ. ಶಿಕ್ಷಣದ ಜತೆಗೆ ಕಲೆ, ನಮ್ಮ ಶ್ರೀಮಂತ ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ ಮಾಡಬೇಕು.  ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಗಳು ಇದಕ್ಕೆ ಸಹಕಾರಿಯಾಗಿವೆ ಎಂದು ಹೇಳಿದರು.

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಡಿ ಕ್ಲಸ್ಟರ್ ಮಟ್ಟ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸುಮಾರು 1200 ಕ್ಕೂ ಹೆಚ್ಚು ಮಕ್ಕಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ. ಶಿಕ್ಷಣ, ಕಲೆ, ಸಂಸ್ಕøತಿ ಇವುಗಳಲ್ಲಿ ನೆಂಟಸ್ಥಿಕೆ ಇರುವುದನ್ನು ಕಾಣಬಹುದಾಗಿದೆ. ಶಿಕ್ಷಣದಿಂದ ಕಲೆ, ಸಂಸ್ಕøತಿಯು ಬೆಳೆಯಲಿದೆ. ಹಾಗಾಗಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡುವ ಕೆಲಸ ಮಾಡಬೇಕಾಗುತ್ತದೆ ಎಂದರು.

 

ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಮಾತನಾಡಿ, ವೈವಿದ್ಯಮಯದಲ್ಲಿ ಏಕತೆ ಕಾಪಾಡಲಿಕ್ಕೆ ಸಂವಿಧಾನ ಅವಕಾಶ ಕಲ್ಪಿಸಿಕೊಟ್ಟಿದೆ. ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉತ್ತಮ ವೇದಿಕೆಯಾಗಿದೆ ಎಂದರು.

ಅತೀ ಶೀಘ್ರದಲ್ಲಿಯೇ ಅನುದಾನಿತ ಶಾಲೆಗಳ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗಿದೆ. ಒಪಿಎಸ್‍ಗೆ ಸಂಬಂಧಿಸಿದಂತೆ ಇತರೆ ರಾಜ್ಯಗಳಲ್ಲಿ ಅಳವಡಿಸಿಕೊಂಡಿರುವ ವಿಧಾನಗಳನ್ನು ಪರಿಶೀಲಿಸಿ ನಮ್ಮ ರಾಜ್ಯದಲ್ಲಿ ಜಾರಿಗೊಳಿಸಿ ಶಿಕ್ಷಕರ ನೆಮ್ಮದಿಯ ಜೀವನಕ್ಕೆ ಅವಕಾಶ ಮಾಡಿಕೊಡಬೇಕು. 12 ರಿಂದ 13 ವರ್ಷಗಳ ಕಾಲ ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸಿದವರು ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಹಾಗಾಗಿ ಅವರಿಗೆ ಅನ್ಯಾಯವಾಗದ ರೀತಿಯಲ್ಲಿ ಸರ್ಕಾರದ ವತಿಯಿಂದ ನಿಯಮ ರೂಪಿಸುವಾಗ ಅವರಿಗೆ ಪೂರಕವಾಗಿರಬೇಕು.  ಖಾಸಗಿ ಶಾಲೆಗಳ ನವೀಕರಣ ಪ್ರಕ್ರಿಯೆ ಕುರಿತು ಸಾಕಷ್ಟು ದೂರುಗಳು ಕೇಳಿಬರುತ್ತಿವೆ.  ವಿದ್ಯಾ ಸಂಸ್ಥೆಗಳ ಮಾಲೀಕರು, ಶಿಕ್ಷಕರನ್ನು ಕಚೇರಿಗೆ ಅಲೆದಾಡಿಸುವ ಕಾರ್ಯ ಸಲ್ಲದು ಎಂದರು.

ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಅವರು ಮಾತನಾಡಿ, ರಾಜ್ಯದ ವಿವಿಧ ಭಾಗಗಳಿಂದ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಕೋಟೆಯ ನಾಡು ಚಿತ್ರದುರ್ಗ ಜಿಲ್ಲೆಗೆ ಆಗಮಿಸಿರುವುದು ಸಂತಸ ತಂದಿದೆ.  ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲು ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ ಎಂದರು.
ಮುರುಘಾಮಠದ ಆಡಳಿತ ಮಂಡಳಿ ಸದಸ್ಯ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿ, ಪ್ರತಿಯೊಂದು ಮಗುವಿಗೆ ಸಾಂಸ್ಕøತಿಕ ಜಗತ್ತು ಇದೆ. ಪ್ರತಿಭೆ ಅನಾವರಣ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯಾದರೆ ಉಳಿದ ಎಲ್ಲ ಕ್ಷೇತ್ರಗಳು ಸಹ ಸುಧಾರಣೆ ಆಗಲು ಸಾಧ್ಯವಾಗಲಿದೆ. ಪ್ರತಿಭಾವಂತರಿಗೆ ಅವಕಾಶ ಬೇಕು. ರಾಜ್ಯದ ಸುಮಾರು 25 ಸಾವಿರ ಮಕ್ಕಳಿಗೆ ನೀಟ್, ಸಿಇಟಿ ಸೇರಿದಂತೆ ವೃತ್ತಿಪರ ಕೋರ್ಸ್‍ಗಳಿಗೆ ಉಚಿತವಾಗಿ ತರಬೇತಿ ನೀಡುವ ಕಾರ್ಯಕ್ರಮವನ್ನು 2 ರಿಂದ 3 ಲಕ್ಷ ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕು. ಉನ್ನತ ಶಿಕ್ಷಣದಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ಹೆಚ್ಚಿನ ಸೀಟು ಹಂಚಿಕೆಯಾಗುವಂತಾಗಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಡಿಡಿಪಿಯು ಪುಟ್ಟಸ್ವಾಮಿ, ಡಯಟ್ ಪ್ರಾಂಶುಪಾಲ ನಾಸಿರುದ್ದೀನ್ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಡಿವೈಪಿಸಿ ವೆಂಕಟೇಶ್ ನೇತೃತ್ವದಲ್ಲಿ ಮಠದ ಕುರುಬರಹಟ್ಟಿ ಶಾಲೆಯ ಮಕ್ಕಳು ಸಂವಿಧಾನದ ಪೀಠಿಕೆಯನ್ನು ಇದೇ ಸಂದರ್ಭಧಲ್ಲಿ ವಾಚಿಸಿದರು.  ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಅಂಗವಾಗಿ ವಿವಿಧ ಶಾಲೆಗಳ ಮಕ್ಕಳು ವೈವಿಧ್ಯಮಯ ಸಾಂಸ್ಕøತಿಕ ಕಲೆಯನ್ನು ಇದೇ ವೇಳೆ ಪ್ರದರ್ಶಿಸಿ, ಮೆಚ್ಚುಗೆಗೆ ಪಾತ್ರರಾದರು.

suddionenews

Recent Posts

ಯಾರಾಗ್ತಾರೆ ದಿಲ್ಲಿ ದೊರೆ : ನಾಳೆ ಕುತೂಹಲಕ್ಕೆ ತೆರೆ !

    ಸುದ್ದಿಒನ್ ನಾಳೆ ದೆಹಲಿಯ ದೊರೆ ಯಾರಾಗುತ್ತಾರೆ ? ಎಎಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತಾ...? ಅಥವಾ ಭಾರತೀಯ…

50 minutes ago

25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿ : ಸಚಿವ ಎಸ್.ಮಧು ಬಂಗಾರಪ್ಪ

  ದಾವಣಗೆರೆ: ಫೆ.7 : ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಹುದ್ದೆಗಳ ಕೊರತೆ ಇದ್ದು 2025-26 ನೇ ಸಾಲಿನಲ್ಲಿ ಸರ್ಕಾರಿ,…

56 minutes ago

ತುಮಕೂರಿನಲ್ಲಿ 7 ವರ್ಷದ ಮಗುವನ್ನು ಬಲಿ ಪಡೆದ ಡೆಂಗ್ಯು..!

ತುಮಕೂರು: ಈಗಷ್ಟೇ ಚಳಿಗಾಲ ಕಳೆದು ಬೇಸಿಗೆ ಶುರುವಾಗಿದೆ. ರೋಗ ರುಜಿನಗಳು ಆರಂಭವಾಗುತ್ತಿವೆ. ವೈರಲ್ ಫೀವರ್ ಜೊತೆಗೆ ಡೇಂಘಿ ಜ್ಚರ ಕೂಡ…

1 hour ago

ಫೆಬ್ರವರಿ 09 ಮತ್ತು 10ರಂದು ಶಾಂತಿಸಾಗರ ನೀರು ಸರಬರಾಜು ತಾತ್ಕಾಲಿಕ ಸ್ಥಗಿತ

  ಚಿತ್ರದುರ್ಗ. ಫೆ.07: ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ಶಾಂತಿಸಾಗರ ಜಾಕ್‍ವೆಲ್ ವಿದ್ಯುತ್ ಸ್ಥಾವರದಲ್ಲಿ…

2 hours ago

ರಾಜ್ಯ ಬಜೆಟ್ ಗೆ ಸಿದ್ದತೆ : ಮದುವೆ ಮನೆಯಿಂದ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಡಿಕೆಶಿ

ಬೆಂಗಳೂರು: ಇತ್ತೀಚೆಗಷ್ಟೇ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ರಾಜ್ಯ ಬಜೆಟ್ ನತ್ತ ಜನರ ಚಿತ್ತ ನೆಟ್ಟಿದೆ. ರಾಜ್ಯ ಬಜೆಟ್ ನಲ್ಲಿ ಇನ್ನಷ್ಟು…

2 hours ago

ರತನ್ ಟಾಟಾ ಉಯಿಲ್ ನಲ್ಲಿ ಮೋಹಿನಿಗೆ 500 ಕೋಟಿ : ಹುಡುಕಾಟ ಶುರು..!

ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…

2 hours ago