Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯಲ್ಲಿ 1.40 ಲಕ್ಷಕ್ಕೂ ಹೆಚ್ಚು ರೈತರ ನೋಂದಣಿ ನಿರೀಕ್ಷೆ: ಬೆಳೆ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ಮಾಡಿದರೆ ಕಠಿಣ ಕ್ರಮ

---Advertisement---

ಚಿತ್ರದುರ್ಗ. ಜು.28: ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ಬೆಳೆ ಕಟಾವು ಪ್ರಯೋಗಗಳು ನಡೆಯಬೇಕು. ಯಾವುದೇ ಲೋಪಕ್ಕೆ ಅವಕಾಶ ನೀಡಬಾರದು. ಬೆಳೆ ಸಮೀಕ್ಷೆ ಕಾರ್ಯ ನಿರ್ಲಕ್ಷ್ಯಿಸುವ ಅಧಿಕಾರಿಗಳ ವಿರುದ್ಧ ಯಾವುದೇ ಮುಲಾಜು ತೋರದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಸಿದರು.

 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಮಂಗಳವಾರ 2026-27ನೇ ಸಾಲಿನ ಬೆಳೆ ಸಮೀಕ್ಷೆ ಕಾರ್ಯಕ್ರಮ ಅನುಷ್ಠಾನ, ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಸೇರಿದಂತೆ ಕೃಷಿ ಇಲಾಖೆ ವಿವಿಧ ಕಾರ್ಯಕ್ರಮಗಳ ಕುರಿತು ಜರುಗಿದ, ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳೆ ಸಮೀಕ್ಷೆಯಲ್ಲಿ ಲೋಪದೋಷಗಳಾಗದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಬೆಳೆ ಸಮೀಕ್ಷೆಯ ಪಾರದರ್ಶಕತೆ ಮತ್ತು ನಿಖರತೆ ಅತ್ಯಂತ ಮುಖ್ಯ. ಕೃಷಿ, ಕಂದಾಯ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು. ಬೆಳೆ ಸಮೀಕ್ಷೆಯ ಶೇಕಡಾವಾರು ದೋಷಗಳು ಕೆಲವು ಇಲಾಖೆಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು, ಇದನ್ನು ತಕ್ಷಣವೇ ಸರಿಪಡಿಸಿಕೊಳ್ಳಬೇಕು. ಬೆಳೆ ಸಮೀಕ್ಷೆ ಕುರಿತು ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಮೀಕ್ಷೆ ತಾಕುಗಳಿಗೆ ಭೇಟಿ ನೀಡಿ ಭೌತಿಕವಾಗಿ ಪರಿಶೀಲನೆ ನಡೆಸಬೇಕು.

 

ತಾಲ್ಲೂಕು ಹಂತದಲ್ಲಿ ಕೃಷಿ ಹಾಗೂ ತೋಟಗಾರಿಕೆ ಅಧಿಕಾರಿಗಳು ಬೆಳೆ ಸರ್ವೇ ಕಾರ್ಯದ ನೋಡಲ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಬೇಕು. ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಬೆಳೆ ಸಮೀಕ್ಷೆ ಕುರಿತು ಸಭೆಗಳನ್ನು ಯೋಜಿಸುವ ಮೂಲಕ ಕೆಳ ಹಂತದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಬೇಕು. ಪ್ರತಿ ಹದಿನೈದು ದಿನಗಳಿಗೆ ಒಮ್ಮೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಳೆ ಸಮೀಕ್ಷೆ ಪ್ರಗತಿ ಪರಿಶೀಲನೆ ನಡೆಸುವುದಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಮಾತನಾಡಿ, ಬೆಳೆ ಸಮೀಕ್ಷೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತಿದೆ. ಕಳೆದ ವರ್ಷದಿಂದ ಕೃತಕ ಬುದ್ಧಿಮತ್ತೆ ಆಧಾರಿತ ವೆರಿಫಿಕೇಶನ್ ತಂತ್ರಜ್ಞಾನವನ್ನು ಪರಿಚಯಿಸಲಾಗಿದ್ದು, ರೈತರು ಅಥವಾ ಜಮೀನು ಸಮೀಕ್ಷೆದಾರರು ಅಪ್‍ಲೋಡ್ ಮಾಡುವ ಫೆÇೀಟೋಗಳ ನೈಜತೆಯನ್ನು ತಂತ್ರಜ್ಞಾನವೇ ಪರಿಶೀಲಿಸುತ್ತದೆ. ರೈತರು ನೋಂದಾಯಿತ ಭೂಮಿಯಲ್ಲಿ ಸರಿಯಾದ ಬೆಳೆ ಮಾಹಿತಿ ನೀಡುವುದು ಹಾಗೂ ಜಮೀನಿಗೆ ಭೇಟಿ ನೀಡಿ ನಿಖರ ಫೆÇೀಟೋ ತೆಗೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಸ್ಯಾಟಲೈಟ್ ಹಾಗೂ ಸ್ಥಳೀಯ ಜಿಯೋ-ಫೆನ್ಸಿಂಗ್ ವ್ಯವಸ್ಥೆಯ ಮೂಲಕ ಯಾವುದೇ ದುರ್ಬಳಕೆಯಾಗದಂತೆ ತಡೆಯಲಾಗುತ್ತಿದೆ ಎಂದರು.

 

ರೈತರಿಗೆ ನ್ಯಾಯಯುತ ಪರಿಹಾರ ಸೌಲಭ್ಯ ದೊರಕಲಿ:
ರೈತರು ಪಾವತಿಸುವ ಬೆಳೆವಿಮೆ ನೋಂದಣಿಗೆ ತಕ್ಕಂತೆ ಅವರಿಗೆ ನ್ಯಾಯಯುತ ಪರಿಹಾರ ಸೌಲಭ್ಯ ದೊರೆಯುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಮಳೆ ಕೊರತೆಯಿಂದ ಬಿತ್ತನೆ ವಿಫಲಗೊಂಡಲ್ಲಿ ರೈತರಿಗೆ ತೊಂದರೆಯಾಗಬಾರದು. ನಿಯಮಾವಳಿ ಪ್ರಕಾರ ಶೇ 25 ರಷ್ಟು ಪರಿಹಾರ ಮೊತ್ತ ದೊರೆಯುವಂತೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ಬಿತ್ತಿದ ಬೆಳೆ ವಿಫಲಗೊಂಡಲ್ಲಿ, ಬೆಳೆ ಅಳಿಸಿ, ಬೇರೆ ಬೆಳೆ ಬಿತ್ತಿಲು ಮುಂದಾಗುವ ರೈತರಿಗೆ, ಕಡ್ಡಾಯವಾಗಿ ಬೆಳೆವಿಮೆ ನೊಂದಣಿಯಲ್ಲಿ ಕಡ್ಡಾಯವಾಗಿ ಬೆಳೆ ಹೆಸರು ಬದಲಾಯಿಸಲು ಜಾಗೃತಿ ಮೂಡಿಸಬೇಕು. ಬೆಳೆ ಸಮೀಕ್ಷೆ ಹಾಗೂ ವಿಮೆ ನೋಂದಣಿ ಮಧ್ಯೆ ವ್ಯತ್ಯಾಸ ಕಂಡುಬಂದರೆ, ಅದನ್ನು ತಾಲೂಕು ಮಟ್ಟದ ಸಮಿತಿ ಮೂಲಕ ಪರಿಶೀಲಿಸಿ ರೈತರ ಹಿತ ಕಾಯಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.

 

ಬೆಳೆ ಕಟಾವು ಪ್ರಯೋಗ ನಡೆಸಲು ಪ್ಲಾಟ್ ಆಯ್ಕೆ ಮಾಡುವಾಗ ಅಧಿಕಾರಿಗಳು ಅತ್ಯಂತ ಎಚ್ಚರಿಕೆ ವಹಿಸಬೇಕು. ಕೇವಲ ನೀರಾವರಿ ಅಥವಾ ಸಮೃದ್ಧವಾಗಿ ಬೆಳೆದ ಪ್ಲಾಟ್‍ಗಳನ್ನು ಮಾತ್ರ ಆಯ್ಕೆ ಮಾಡದೆ, ಪ್ರಾಮಾಣಿಕ ಹಾಗೂ ಪಾರದರ್ಶಕ ರೀತಿಯಲ್ಲಿ ಸಮೀಕ್ಷೆ ನಡೆಸಬೇಕು. ಅಧಿಕಾರಿಗಳು ಮತ್ತು ವಿಮಾ ಕಂಪನಿಯ ಪ್ರತಿನಿಧಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಕನಿಷ್ಠ ಶೇ 10 ರಷ್ಟು ಕ್ಷೇತ್ರಗಳ ತಪಾಸಣೆ ನಡೆಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

 

1.40 ಲಕ್ಷಕ್ಕೂ ಹೆಚ್ಚು ರೈತರ ನೋಂದಣಿ ನಿರೀಕ್ಷೆ:
ಜಿಲ್ಲೆಯಲ್ಲಿ ಬೆಳೆವಿಮೆ ನೋಂದಣಿ ಪ್ರಕ್ರಿಯೆ ಚುರುಕಿನಿಂದ ಸಾಗುತ್ತಿದೆ. ಚಳ್ಳಕೆರೆ ತಾಲೂಕಿನಲ್ಲಿ ಇದುವರೆಗೆ 1.29 ಲಕ್ಷಕ್ಕೂ ಹೆಚ್ಚು ಅರ್ಜಿಗಳು ನೋಂದಣಿಯಾಗಿದ್ದು, ಕೃಷಿ ಸಂಘಟನೆಗಳ ಪೆÇೀರ್ಟಲ್‍ನಲ್ಲಿ 1.02 ಲಕ್ಷಕ್ಕೂ ಹೆಚ್ಚು ರೈತರ ವಿವರ ದಾಖಲಾಗಿದೆ. ಕಳೆದ ವರ್ಷ 1.15 ಲಕ್ಷ ರೈತರು ನೋಂದಾಯಿಸಿಕೊಂಡಿದ್ದರು. ಈ ಬಾರಿ ಜುಲೈ 31ರ ಕೊನೆಯ ದಿನಾಂಕದ ವೇಳೆಗೆ ನೋಂದಣಿ ಸಂಖ್ಯೆ 1.40 ಲಕ್ಷ ದಾಟುವ ನಿರೀಕ್ಷೆಯಿದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಮಾಹಿತಿ ನೀಡಿದರು.
ಗೈರಾದ ವಿಮಾ ಕಂಪನಿ ಅಧಿಕಾರಿಗೆ ನೋಟಿಸ್ :
ಬೆಳೆವಿಮೆ ಕಂಪನಿಯ ಅಧಿಕಾರಿ ಸಭೆಗೆ ಗೈರು ಹಾಜರಿಯಾಗಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅಪರ ಜಿಲ್ಲಾಧಿಕಾರಿಗಳು, ಸಭೆಯ ನೋಟಿಸ್ ನೀಡಿದ್ದರೂ, ಗೈರುಹಾಜರಾಗುವುದು ಅಥವಾ ಸಭೆಗೆ ಮುನ್ನವೇ ನೆಪ ಹೇಳಿ ಮೇಲ್ ಕಳುಹಿಸುವುದು ಸರಿಯಾದ ನಡವಳಿಕೆಯಲ್ಲ. ಮೊದಲ ದಿನದಿಂದಲೇ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ವಿಮಾ ಕಂಪನಿ ಅಧಿಕಾರಿಯಿಂದ ನಡೆಯುತ್ತಿದೆ. ಇಂತಹ ಧೋರಣೆಯನ್ನು ಸಹಿಸಲು ಸಾಧ್ಯವಿಲ್ಲ. ಗೈರು ಹಾಜರಾದ ಅಧಿಕಾರಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದರು.

 

ಬೆಳೆವಿಮೆ ಯೋಜನೆಯ ಅನುμÁ್ಠನದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ, ಲೋಪದೋಷ ಅಥವಾ ನಿಯಮಗಳ ಉಲ್ಲಂಘನೆಯನ್ನು ಸಹಿಸಲು ಸಾಧ್ಯವಿಲ್ಲ. ರೈತರ ಹಿತರಕ್ಷಣೆಗೆ ಧಕ್ಕೆಯುಂಟಾದರೆ ಸಂಬಂಧಿಸಿದ ವಿಮಾ ಸಂಸ್ಥೆಯ ವಿರುದ್ಧ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಎಚ್ಚರಿಸಿದರು.
ಕಳೆದ ಬಾರಿ ಸ್ಥಳೀಯ ವಿಕೋಪ ಹಾಗೂ ಬೆಳೆ ಹಾನಿಗೆ ಸಂಬಂಧಿಸಿದಂತೆ ಕೆಲವೆಡೆ ದುರುಪಯೋಗವಾಗಿರುವ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಕೃಷಿ ಹಾಗೂ ವಿಮಾ ಸಂಸ್ಥೆಯ ಪ್ರತಿನಿಧಿಗಳು ಕಡ್ಡಾಯವಾಗಿ ಸ್ಥಳಕ್ಕೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ತಿಳಿಸಿದರು.

 

ಎಣ್ಣೆಕಾಳು ವಿಸ್ತೀರ್ಣ ಹಾಗೂ ಉತ್ಪಾದನೆ ಹೆಚ್ಚಳಕ್ಕೆ ಯೋಜನೆ:
ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ-ಎಣ್ಣೆಕಾಳು ಕಾರ್ಯಕ್ರಮದ ಅನುಷ್ಠಾನ ಮಾರ್ಗಸೂಚಿ ಸಭೆಯಲ್ಲಿ ಮಾಹಿತಿ ನೀಡಿದ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್, ದೇಶದಲ್ಲಿ ಎಣ್ಣೆಕಾಳುಗಳ ಕೊರತೆಯಿದ್ದು, ಹೊರದೇಶಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಕೊರತೆ ನೀಗಿಸಲು ಸ್ಥಳೀಯವಾಗಿ ಎಣ್ಣೆಕಾಳು ಬೆಳೆಗಳ ವಿಸ್ತೀರ್ಣ, ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಿಸುವ ನಿಟ್ಟಿನಲ್ಲಿ ಯೋಜನೆ ಜಾರಿಗೆ ತರಲಾಗಿದೆ.
ಜಿಲ್ಲೆಯಲ್ಲಿ ದಶಕಗಳಿಂದ ಖಿಒಗಿ-2 ತಳಿಯ ಶೇಂಗಾವನ್ನೇ ಹೆಚ್ಚಾಗಿ ಬಳಸಲಾಗುತ್ತಿದೆ. ಇದರ ಉತ್ಪಾದಕತೆ ಕಡಿಮೆಯಾಗುತ್ತಿದ್ದು, ಇದರ ಬದಲಿಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆಊ-256 ನಂತಹ ಹೆಚ್ಚಿನ ಇಳುವರಿ ನೀಡುವ ಹೊಸ ತಳಿಗಳನ್ನು ಪರಿಚಯಿಸಲಾಗುತ್ತಿದೆ. ಮೌಲ್ಯವರ್ಧನೆ ಕ್ಲಸ್ಟರ್ ಯೋಜನೆಯಡಿ ಕೆಒಎಫ್ ಮತ್ತು ಕೆಎಸ್‍ಎಸ್‍ಸಿ ಸಂಸ್ಥೆಗಳನ್ನು ಪಾಲುದಾರರನ್ನಾಗಿ ಮಾಡಿಕೊಳ್ಳಲಾಗಿದೆ. ಶೇಂಗಾ, ಸೂರ್ಯಕಾಂತಿ, ಕುಸುಮೆ ಹಾಗೂ ಅರಳೆ ಬೆಳೆಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ ಎಂದರು.
ರೈತರನ್ನು ಎಣ್ಣೆಕಾಳು ಬೆಳೆಯಲು ಪ್ರೋತ್ಸಾಹಿಸಲು ಶೇ.90ರಷ್ಟು ರಿಯಾಯಿತಿ ದರದಲ್ಲಿ ಉತ್ತಮ ತಳಿಯ ಬಿತ್ತನೆ ಬೀಜಗಳನ್ನು ಪೂರೈಸಲಾಗುತ್ತಿದೆ. ಚಿತ್ರದುರ್ಗ ಹಾಗೂ ಹಿರಿಯೂರು ಭಾಗದಲ್ಲಿ ಶೇಂಗಾ ಮತ್ತು ಸೂರ್ಯಕಾಂತಿ ಬೆಳೆಗಳಿಗೆ ಉತ್ತಮ ವಾತಾವರಣವಿದ್ದು, ರೈತರಿಗೆ ಸೂಕ್ತ ಜಾಗೃತಿ ಮೂಡಿಸಿ ಎಣ್ಣೆಕಾಳು ಬೆಳೆಯಲು ಪ್ರೋತ್ಸಾಹಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

 

ಇದೇ ಸಂದರ್ಭದಲ್ಲಿ 2026-27ನೇ ಸಾಲಿನ ಹತ್ತಿ ಉತ್ಪಾದಕತೆ ಅಭಿಯಾನ, ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಪರ್ ಡ್ರಾಪ್ ಮೋರ್ ಕ್ರಾಪ್-ಸೂಕ್ಷ್ಮ ನೀರಾವರಿ, ದ್ವಿದಳ ಧಾನ್ಯಗಳಲ್ಲಿ ಆತ್ಮ ನಿರ್ಭರತಾ ಅಭಿಯಾನದ ಮಾರ್ಗಸೂಚಿಗಳ ಸಭೆ ನಡೆಯಿತು.

 

ಕೃಷಿ ಅಂಕಿ ಅಂಶಗಳ ತ್ರೈಮಾಸಿಕ ಸಮನ್ವಯ ಸಮಿತಿ ಸಭೆ:‌ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ 2026-27ನೇ ಸಾಲಿನ ಮೊದಲನೇ ಕೃಷಿ ಅಂಕಿ-ಅಂಶಗಳ ತ್ರೈಮಾಸಿಕ ಸಮನ್ವಯ ಸಮಿತಿ ಸಭೆ ನಡೆಯಿತು. ಬೆಳೆ ಕಟಾವು ಪ್ರಯೋಗದ ಮಹತ್ವದ ಬಗ್ಗೆ ಸೂಚನೆ ನೀಡಿದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಮೂಲ ಕಾರ್ಯಕರ್ತರು ಹೆಚ್ಚು ಗಮನವಿಟ್ಟು ಪ್ರಯೋಗಗಳನ್ನು ಕೈಗೊಳ್ಳಬೇಕು. ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಕೃಷಿ ಇಲಾಖೆ ಬೆಳೆಗಳಿಗೆ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತೋಟಗಾರಿಕೆ ಬೆಳೆಗಳ ಕಟಾವು ಪ್ರಯೋಗಗಳನ್ನು ಮೇಲ್ವಿಚಾರಣೆ ನಡೆಸಲು ಸೂಚಿಸಿದರು. ಇದೇ ಸಂದರ್ಭದಲ್ಲಿ ಜನನ-ಮರಣ ಜಿಲ್ಲಾಮಟ್ಟದ ನಾಗರೀಕ ನೋಂದಣಿ ಪದ್ಧತಿ ಸಮನ್ವಯ ಸಮಿತಿ ಸಭೆ ನಡೆಯಿತು.

 

ಸಭೆಯಲ್ಲಿ ಉಪ ಕಾರ್ಯದರ್ಶಿ ಎಂ.ಬಾಬು, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರವಿಕುಮಾರ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತಾ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಎಂ.ಪಿ.ಪ್ರವೀಣ್, ಸಹಾಯಕ ಸಾಂಖ್ಯಿಕ ಅಧಿಕಾರಿ ಅಶ್ವತ್ಥಾಮ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now