ಸುದ್ದಿಒನ್ : ಉತ್ತರ ನೈಜೀರಿಯಾದ ನೈಜರ್ ನದಿಯಲ್ಲಿ ಆಹಾರ ಮಾರುಕಟ್ಟೆಗೆ ಸಾಗಿಸುತ್ತಿದ್ದ ದೋಣಿಯೊಂದು ಮುಳುಗಿದ ನಂತರ ಕನಿಷ್ಠ 100 ಪ್ರಯಾಣಿಕರು, ಅವರಲ್ಲಿ ಹೆಚ್ಚಿನವರು ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ದೋಣಿಯು ಕೋಗಿ ರಾಜ್ಯದಿಂದ ನೆರೆಯ ನೈಜರ್‌ಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದಾಗ ಮುಳುಗಿದೆ ಎಂದು ನೈಜರ್ ರಾಜ್ಯ ತುರ್ತು ನಿರ್ವಹಣಾ ಏಜೆನ್ಸಿಯ ವಕ್ತಾರ ಇಬ್ರಾಹಿಂ ತಿಳಿಸಿದ್ದಾರೆ.
ಮುಳುಗಡೆಗೆ ಕಾರಣವೇನು ಎಂಬುದನ್ನು ಅಧಿಕಾರಿಗಳು ಖಚಿತಪಡಿಸಿಲ್ಲ. ಆದಾಗ್ಯೂ, ಬೋಟ್‌ನಲ್ಲಿ 200 ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪ್ರಸ್ತುತ ರಕ್ಷಣಾ ಕಾರ್ಯಗಳು ನಡೆಯುತ್ತಿವೆ.ಓವರ್‌ಲೋಡ್ ಕಾರಣ ಆಗಿರಬಹುದು ಎಂದು ಹೇಳಲಾಗುತ್ತಿದೆ.