Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

​ಬೆಂಗಳೂರಿನ ‘ನಮ್ಮಾಭಿಮಾನ’ ಸಮಾರಂಭಕ್ಕೆ ಚಿತ್ರದುರ್ಗದಿಂದ 1500ಕ್ಕೂ ಹೆಚ್ಚು ಸರ್ಕಾರಿ ನೌಕರರು ಭಾಗಿ: ಮಾಲತೇಶ್ ಮುದ್ದಜ್ಜಿ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜು. 09 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಯವರ ನೇತೃತ್ವದಲ್ಲಿ ದಿನಾಂಕ 11-07-2026 ಶನಿವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿ ಯಲ್ಲಿ ರಾಜ್ಯದ 6 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರ ಪರವಾಗಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಗೆ ಬೃಹತ್ “ನಮ್ಮಾಭಿಮಾನದ ಅಭಿನಂದನಾ ಸಮಾರಂಭ”ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷರು ಹಾಗೂ ವಿಭಾಗೀಯ ಉಪಾಧ್ಯಕ್ಷರಾದ ಮಾಲತೇಶ್ ಮುದ್ದಜ್ಜಿ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಸಮಾರಂಭದಲ್ಲಿ ಮುಖ್ಯಮಂತ್ರಿಗಳಿಗೆ ಹಾಗೂ ಉಪ ಮುಖ್ಯಮಂತ್ರಿಗಳಿಗೆ ಅಭಿನಂದನೆ ಹಾಗೂ ಔPS ಮತ್ತು ಕೇಂದ್ರ ಮಾದರಿ ವೇತನ ಜಾರಿಗೆ ಹಕ್ಕೊತ್ತಾಯವನ್ನು ಮಾಡಲಾಗುತ್ತದೆ. ಈ ಸಮಾರಂಭದಲ್ಲಿ ಮುಖ್ಯಮಂತ್ರಿಗಳಾದ  ಡಿ.ಕೆ ಶಿವಕುಮಾರ ಮತ್ತು ಉಪ ಮುಖ್ಯಮಂತ್ರಿಗಳಾದ  ಜಿ ಪರಮೇಶ್ವರ ರವರನ್ನು ಸನ್ಮಾನಿಸಿ ಅಭಿನಂದಿಸುವುದರ ಜೊತೆಗೆ, ಸರ್ಕಾರಿ ನೌಕರರ ಬಹುದಿನದ ಬೇಡಿಕೆಗಳಾದ ಹಳೆಯ ಪಿಂಚಣಿ ಯೋಜನೆ ಔPS ಜಾರಿ ಮತ್ತು ಕೇಂದ್ರ ಸರ್ಕಾರದ ಮಾದರಿ ವೇತನ ಜಾರಿಗಾಗಿ ಬೃಹತ್ ಹಕ್ಕೊತ್ತಾಯವನ್ನು ಮಂಡಿಸಲಾಗುವುದು. ಈ ಸಮಾರಂಭದಲ್ಲಿ  ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದ ಮಹಾಸ್ವಾಮಿಗಳು ಹಾಗೂ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡುವರು

ಈ “ನಮ್ಮಾಭಿಮಾನ” ಸಮಾರಂಭವನ್ನು ಯಶಸ್ವಿಗೊಳಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸರ್ಕಾರಿ ನೌಕರರು, ಶಿಕ್ಷಕರು, ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಇದರಂತೆ ನಮ್ಮ ಜಿಲ್ಲೆಯ ವತಿಯಿಂದ 1500 ಕ್ಕೂ ಹೆಚ್ಚಿನ ನೌಕರರು ಭಾಗವಹಿಸಲಿದ್ದಾರೆ ಎಂದು ಮಾಲತೇಶ್ ಮುದ್ದಜ್ಜಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now