Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

20 ದಿನಕ್ಕೆ 3 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹ

---Advertisement---

ರಾಯಚೂರು: ರಾಯರ ಮಠಕ್ಕೆ ಹೋಗುವವರು ದಿನೇ ದಿನೇ ಹೆಚ್ಚಾಗ್ತಾ ಇದ್ದಾರೆ. ರಾಯರಿದ್ದಾರೆ ಅನ್ನೋದು ಭಕ್ತರಿಗೆ ಅರಿವಾಗಿದೆ. ಹೀಗಾಗಿಯೇ ಭಕ್ತರ ಸಂಖ್ಯೆ ಕೂಡ ಹೆಚ್ಚಾಗಿದೆ. ಇದೀಗ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಬರೀ 20 ದಿನಗಳಿಗೆ ಕೋಟ್ಯಾಂತರ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

ವರ್ಷದ ಕೊನೆಯ ತಿಂಗಳು ಡಿಸೆಂಬರ್ ತಿಂಗಳಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಖ್ಯೆ ಹೆಚ್ಚಾಗಿತ್ತು. ಈ ಮೂಲಕ ಕಳೆದ 20 ದಿನದಲ್ಲಿ 3,73,66,587 ರೂ. ಕಾಣಿಕೆ ಸಂಗ್ರಹವಾಗಿದೆ. ಈ ಪೈಕಿ ಸಂಗ್ರಹವಾದ ಕಾಣಿಕೆಯಲ್ಲಿ 3,62,69,247 ರೂ. ಕರೆನ್ಸಿ ನೋಟುಗಳು ಹಾಗೂ 10,97,340 ರೂ. ನಾಣ್ಯಗಳು ಸಂಗ್ರಹವಾಗಿವೆ.

ರಾಘವೇಂದ್ರ ಸ್ವಾಮಿಗಳು ಅಂದ್ರೆ ನಮ್ಮ ರಾಜ್ಯ ಮಾತ್ರವಲ್ಲ, ಬೇರೆ ರಾಜ್ಯದಿಂದಲೂ ಭಕ್ತರು ಬರುತ್ತಾರೆ. ಹರಕೆ ರೂಪದಲ್ಲಿ ಕಾಣಿಕೆಯನ್ನ ನೀಡುತ್ತಾರೆ. ಅದು ಹಣದ ರೂಪದಲ್ಲಾದರೂ ಸರಿ, ಚಿನ್ನ, ಬೆಳ್ಳಿ ರೂಪದಲ್ಲಾದರೂ ಸರಿ. ಭಕ್ತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆ ದೇವಾಲಯದ ಅಂಗಳದಲ್ಲಿ ಸರಿಯಾದ ವ್ಯವಸ್ಥೆಯನ್ನು ಮಾಡಿದ್ದಾರೆ. ನಾಳೆ ಹೊಸ ವರ್ಷವಾದ ಕಾರಣ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾಧ್ಯತೆ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...