Connect with us

Hi, what are you looking for?

ಪ್ರಮುಖ ಸುದ್ದಿ

ರಾಜ್ಯದಲ್ಲಿ 300 ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಪತ್ತೆ : ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ 300 ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಕಂಡುಬಂದಿದ್ದು, ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ವ್ಯವಸ್ಥೆ ಇದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 300 ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಸೋಂಕಿತರು ಇದ್ದಾರೆ ಎಂದು ಪ್ರಾಥಮಿಕ ವರದಿ ಬಂದಿದೆ. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಇದೆ. 17 ಮೆಡಿಕಲ್ ಕಾಲೇಜುಗಳಲ್ಲಿ ಕೂಡ ವ್ಯವಸ್ಥೆ ಇದೆ. ಆದರೆ ಔಷಧಿ ಸ್ವಲ್ಪ ಕೊರತೆ ಇದೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಜೊತೆ ಈ ಬಗ್ಗೆ ಚರ್ಚಿಸಲಾಗಿದೆ ಎಂದರು.

ಇಡೀ ದೇಶದಲ್ಲಿ ವರ್ಷಕ್ಕೆ 100-200 ರಷ್ಟು ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗುತ್ತಿದ್ದರು. ಈಗ ರಾಜ್ಯದಲ್ಲೇ 300 ಕ್ಕೂ ಅಧಿಕ ಸೋಂಕಿತರಿರುವಾಗ ಔಷಧಿ ಕೊರತೆ ಕಂಡುಬರುತ್ತದೆ. ಇದಕ್ಕಾಗಿ ಔಷಧ ಉತ್ಪಾದನೆ ಹೆಚ್ಚಳ ಮಾಡಲಾಗಿದೆ. 1 ಸಾವಿರಕ್ಕೂ ಅಧಿಕ ವೈಲ್ ಗಳನ್ನು ಕಳುಹಿಸಿಕೊಡುವ ನಿರೀಕ್ಷೆಯೂ ಇದೆ. *ಬ್ಲ್ಯಾಕ್ ಫಂಗಸ್ ಗೆ 1,150 ವೈಲ್ ಔಷಧಿ ರಾಜ್ಯಕ್ಕೆ ದೊರೆತಿದೆ. 20 ಸಾವಿರ ವೈಲ್ ಗೆ ಬೇಡಿಕೆ ಇಡಲಾಗಿದೆ* ಎಂದರು.

ಈ ಸೋಂಕು ಎಲ್ಲಿಂದ ಬರುತ್ತಿದೆ ಎಂದು ಪತ್ತೆ ಮಾಡಲು ಸಮಿತಿ ರಚಿಸಿದ್ದು, ಈ ಸಮಿತಿ ವರದಿ ನೀಡಿದೆ. ಸ್ಟೀರಾಯಿಡ್ ಜೊತೆಗೆ ಹ್ಯುಮಿಡಿಫೈರ್ ನಲ್ಲಿ ನಲ್ಲಿ ನೀರು ಬಳಕೆ, ಐಸಿಯು ವೆಂಟಿಲೇಟರ್ ಅನ್ನು ಇನ್ನೊಬ್ಬರಿಗೆ ಬಳಸುವಾಗ, ಒಂದೇ ಮಾಸ್ಕ್ ದೀರ್ಘಕಾಲ ಬಳಕೆ, ಟ್ಯೂಬ್, ಹಾಸಿಗೆ ಮೊದಲಾದ ಮೂಲಗಳಿಂದ ಸೋಂಕು ಬರುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದನ್ನು ತಡಗಟ್ಟುವ ಬಗೆಯನ್ನೂ ಇದರಲ್ಲಿ ತಿಳಿಸಲಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ಕಟ್ಟಡ ನವೀಕರಣ ಕಾಮಗಾರಿ ನಡೆಸಬಾರದು, ಹೊರಗಿನವರು ವಾರ್ಡ್‍ಗೆ ಬರಬಾರದು, ಪ್ರತಿ ಪಾಳಿ ಮುಗಿದ ಮೇಲೆ ಸ್ವಚ್ಛತೆ ಮಾಡಬೇಕು, ಪ್ರತಿ ಉಪಕರಣಗಳನ್ನು ಸ್ವಚ್ಛವಾಗಿಡಬೇಕು ಎಂದು ಸೂಚಿಸಲಾಗಿದೆ ಎಂದರು.

Click to comment

Leave a Reply

Your email address will not be published. Required fields are marked *

Latest

ದಿನ ಭವಿಷ್ಯ

ಬುಧವಾರ ರಾಶಿ ಭವಿಷ್ಯ-ಆಗಸ್ಟ್-4,2021 ಕಾಮಿಕಾ ಏಕಾದಶಿ ಸೂರ್ಯೋದಯ: 06:04 AM, ಸೂರ್ಯಸ್ತ: 06:44 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ...

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!