ಹಾಸನ: ಜಿಲ್ಲೆಯಲ್ಲಿ ಸುಮಾರು 300 ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ದಯಾಮರಣ ಕೋರಿ ಅರ್ಜಿ ಸಲ್ಲಿಸಿದ್ದಾರೆ. ರಾಷ್ಟ್ರಪತಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಸರ್ಕಾರ ಪರಿಗಣಿಸಿದ್ದು, ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಈ ಹಿಂದೆ ಮನವಿ ಮಾಡಿಕೊಂಡಿದ್ದರು. ಅತಿಥಿ ಉಪನ್ಯಾಸಕರ ಸಂಬಳ 2ರಿಂದ 3 ಪಟ್ಟು ಹೆಚ್ಚಳ ಮಾಡಲಾಗಿದೆ. 11ರಿಂದ ರೂ.13 ಸಾವಿರ ಸಂಬಳ ಪಡೆಯುತ್ತಿದ್ದ ಅತಿಥಿ ಉಪನ್ಯಾಸಕರು ಇನ್ನು ಮುಂದೆ ರೂ. 32 ಸಾವಿರದವರೆಗೆ ವೇತನ ಪಡೆಯಲಿದ್ದಾರೆ.
ಆದ್ರೆ ಸಚಿವ ಅಶ್ವಥ್ ನಾರಾಯಣ್ ಅವರು ಹೊರಡಿಸಿದ ಅವೈಜ್ಞಾನಿಕ ಆದೇಶವನ್ನ ಹಿಂಪಡೆಯುವಂತೆ ಆಗ್ರಹಿಸಿ ಹಲವು ದಿನಗಳಿಂದ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ಇಬ್ಬಂದಿ ನೀತಿಗೆ ಹಾಸನದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
