ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.12 : ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥಗೊಂಡ ಘಟನೆಗಳು ಪದೇ ಪದೇ ಮರುಕಳುಹಿಸುತ್ತಲೇ ಇದಾವೆ. ಇದೀಗ ಚಿತ್ರದುರ್ಗದ ಉರ್ದು ಶಾಲೆಯಲ್ಲೂ ಇಂಥದ್ದೇ ಘಟನೆ ನಡೆದಿದೆ. ಬಿಸಿಯೂಟ ತಿಂದ ಮಕ್ಕಳಲ್ಲಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ.
https://x.com/suddione/status/1701592132241551628?t=WFo-pfxWfsn1ogV4zhRBsg&s=08
ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಅಸ್ವಸ್ಥರಾದ ಮಕ್ಕಳನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಸದ್ಯಕ್ಕೆ ಮಕ್ಕಳು ಪ್ರಾಣಪಾಯದಿಂದ ಪಾರಾಗಿದ್ದಾರೆ. ಊಟ ಸೇವಿಸಿದ ಬಳಿಕ ಮಕ್ಕಳು ವಾಂತಿ ಮಾಡಿಕೊಂಡಿದ್ದಾರೆ. ನೋಡ ನೋಡತ್ತಿದ್ದಂತೆ ಕುಸಿದು ಬಿದ್ದಿದ್ದಾರೆ. ಎಚ್ಚೆತ್ತ ಶಿಕ್ಷಕರು ಮಕ್ಕಳನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದ್ದಾರೆ.
ಇನ್ನು ಆಸ್ಪತ್ರೆಗೆ ಚಿತ್ರದುರ್ಗ ನಗರ ಠಾಣೆಯ ಸಿಪಿಐ ತಿಪ್ಪೆಸ್ವಾಮಿ ಭೇಟಿ ನೀಡಿದ್ದು, ಮಕ್ಕಳ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಮಕ್ಕಳು ಬಿಸಿಯೂಟದ ಬಳಿಕ ಶೇಂಗಾ ಚಿಕ್ಕಿ ಸೇವಿಸಿದ್ದರು ಎಂಬ ಮಾಹಿತಿ ಇದೆ. ಆದರೆ ಅದರಿಂದಾನೇ ಈ ರೀತಿ ಆಗಿದೆಯಾ ಎಂಬೆಲ್ಲಾ ಮಾಹಿತಿ ಇನ್ನು ಕನ್ಫರ್ಮ್ ಆಗಿಲ್ಲ. ಇದರ ತನಿಖೆಯ ನಂತರ ಏನಾಗಿರಬಹುದು ಎಂಬ ಮಾಹಿತಿ ಸಿಗಲಿದೆ.
ಸ್ಥಳಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.