ಬೆಂಗಳೂರು: ಈಗಾಗಲೇ ರಾಜ್ಯದ 102 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ರೈತರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಕೆಲವೇ ದಿನಗಳಲ್ಲಿ ಎರಡನೇ ಹಂತದ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಈ ಪಟ್ಟಿಯಲ್ಲಿ 50ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯವೇ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಬೇಕಾಗಿದೆ. ಈ ತಿಂಗಳೊಳಗೆ ಬರಪೀಡಿತ ಎಲ್ಲಾ ತಾಲೂಕುಗಳ ಘೋಷಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಸಂಕಷ್ಟದಲ್ಲಿರುವ ರೈತರಿಗೆ ಅಗತ್ಯ ಬೆಂಬಲ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಈಗಾಗಲೇ 102 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದೇವೆ. ನೀವು ಚಿಂತೆ ಮಾಡುವುದು ಬೇಡ, ಕೆಲವೇ ದಿನಗಳಲ್ಲಿ ಎರಡನೇ ಪಟ್ಟಿ ಮೂಲಕ 50 ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪ್ರದೇಶ ಎಂದು ಘೋಷಣೆ ಮಾಡಲಾಗುವುದು. ನಾವು ಕೇಂದ್ರದ ಮಾರ್ಗಸೂಚಿ ಅನುಸಾರ ಬರ ಘೋಷಣೆ ಮಾಡಬೇಕು. ಈ ತಿಂಗಳ ಒಳಗಾಗಿ ಬರ ಪೀಡಿತ ಎಲ್ಲಾ ತಾಲೂಕು ಘೋಷಣೆ ಮಾಡಿ,… pic.twitter.com/Y2u2lUT9zm
— CM of Karnataka (@CMofKarnataka) September 6, 2026










