Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

Morning Running : ಖಾಲಿ ಹೊಟ್ಟೆಯಲ್ಲಿ ಓಡುವುದರಿಂದ ಏನಾಗುತ್ತದೆ ?

---Advertisement---

ಸುದ್ದಿಒನ್ : ದೇಹವನ್ನು ಆರೋಗ್ಯಕರವಾಗಿ ಮತ್ತು ಫಿಟ್ ಆಗಿ ಇರಿಸಿಕೊಳ್ಳಲು ಬಯಸಿದರೆ ಇಡಬೇಕು. ಓಡುವುದರಿಂದ ದೇಹದಲ್ಲಿ ಸ್ಟಾಮಿನಾ ಹೆಚ್ಚುತ್ತದೆ. ಅಥ್ಲೀಟ್ ಗಳು ಮತ್ತು ಕ್ರೀಡಾಪಟುಗಳು ಹೆಚ್ಚಾಗಿ ಖಾಲಿ ಹೊಟ್ಟೆಯಲ್ಲಿ ಓಡುತ್ತಾರೆ. ವಾಸ್ತವವಾಗಿ, ಓಟವು ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಕೊಬ್ಬು ಕೂಡ ವೇಗವಾಗಿ ಕರಗುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಓಡುವುದು ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎನ್ನುತ್ತಾರೆ ತಜ್ಞರು.

ಓಟದಿಂದ ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ. ಸರಾಗವಾದ ರಕ್ತ ಪರಿಚಲನೆಯು ದೇಹವನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಸಹ ಬಲಪಡಿಸುತ್ತದೆ. ಖಾಲಿ ಹೊಟ್ಟೆಯಲ್ಲಿ ಓಡುವ ಪ್ರಯೋಜನಗಳನ್ನು ತಿಳಿದುಕೊಳ್ಳೋಣ.

ಕೊಬ್ಬು ವೇಗವಾಗಿ ಕರಗುತ್ತದೆ :
ತೂಕ ಇಳಿಸಿಕೊಳ್ಳಲು ಬಯಸುವವರು ಖಾಲಿ ಹೊಟ್ಟೆಯಲ್ಲಿ ಓಡುವುದರಿಂದ ಕೊಬ್ಬನ್ನು ವೇಗವಾಗಿ ಕರಗಿಸಬಹುದು. ಈ ನಿಟ್ಟಿನಲ್ಲಿ ಹಲವು ಸಂಶೋಧನೆಗಳೂ ಬೆಳಕಿಗೆ ಬಂದಿವೆ. ಪ್ರತಿದಿನ ಕೆಲವು ನಿಮಿಷಗಳ ಕಾಲ ಓಡುವುದರಿಂದ ದೇಹದ ಹೆಚ್ಚುವರಿ ಕೊಬ್ಬನ್ನು ಕರಗಿಸಬಹುದು.

ಮಧುಮೇಹ ನಿಯಂತ್ರಣದಲ್ಲಿರುತ್ತದೆ : ಹೀಗೆ ಓಡುವುದರಿಂದ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ. ಇದು ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ. ಇದಲ್ಲದೆ, ಖಾಲಿ ಹೊಟ್ಟೆಯಲ್ಲಿ ಓಡುವುದು ಚಯಾಪಚಯವನ್ನು ಆರೋಗ್ಯಕರವಾಗಿರಿಸುತ್ತದೆ. ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಬೆಳಗಿನ ಜಾಗಿಂಗ್ ತುಂಬಾ ಪ್ರಯೋಜನಕಾರಿಯಾಗಿದೆ.

(ಪ್ರಮುಖ ಸೂಚನೆ: ಆರೋಗ್ಯ ತಜ್ಞರು ಮತ್ತು ಇತರ ಅಧ್ಯಯನಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ನಾವು ಈ ವಿವರಗಳನ್ನು ಒದಗಿಸುತ್ತಿದ್ದೇವೆ. ವಿಷಯಗಳು ಕೇವಲ ತಿಳುವಳಿಕೆಗಾಗಿ ಮಾತ್ರ. ನಿಮಗೆ ಯಾವುದೇ ಅನುಮಾನಗಳು ಅಥವಾ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.)

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment