ಮೊರಾಕೊ ಭೂಕಂಪ : 1000 ದಾಟಿದ ಸಾವಿನ ಸಂಖ್ಯೆ 700ಕ್ಕೂ ಅಧಿಕ ಜನರು ಗಂಭೀರ..!

ಮೊರಾಕೊದಲ್ಲಿ ಭೂಕಂಪ ಸಂಭವಿಸಿದ ಪರಿಣಾಮ ಸಾವಿರಾರು ಮಂದಿ ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಭೂಕಂಪನವಾದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವ ಕೆಲಸವಾಗುತ್ತಿದೆ.

ಭೂಕಂಪನದಿಂದ 1037 ಜನ ಸಾವಿಗೀಡಾಗಿದ್ದು, 700ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಶುಕ್ರವಾರ ತಡರಾತ್ರಿ 6.8 ತೀವ್ರತೆಯ ಪ್ರಬಲ ಭೂಕಂಪನವಾಗಿದೆ. ಭೀಕರ ಭೂಕಂಪಕ್ಕೆ ಪ್ರಧಾನಿ ಮೋದಿ ಕೂಡ ಮರುಗಿದ್ದಾರೆ.

‘ಮೊರಾಕೊದ ಭೂಕಂಪನದಿಂದ ಜೀವಹಾನಿ ಉಂಟಾಗಿರುವುದು ತೀವ್ರ ದುಃಖ ತಂದಿದೆ. ಈ ದುರಂತದ ಸಮಯದಲ್ಲಿ ನನ್ನ ಆಲೋಚನೆಗಳು ಮೊರಾಕೊದ ಜನರೊಂದಿಗೆ ಇವೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಈ ಕಷ್ಟದ ಸಮಯದಲ್ಲಿ ಮೊರಾಕೊಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಾಗಿದೆ’ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *