Connect with us

Hi, what are you looking for?

ಪ್ರಮುಖ ಸುದ್ದಿ

ಯುವಜನತೆ, ಮಧ್ಯ ವಯಸ್ಕರಲ್ಲಿ ಹೆಚ್ಚಿದ ಸಾವು : ಸಚಿವ ಸುಧಾಕರ್ ಆತಂಕ

ಬೆಂಗಳೂರು: 48.05 ಲಕ್ಷ ಜನರಿಗೆ ಸೋಮವಾರದವರೆಗೆ ಕೋವಿಡ್ ಲಸಿಕೆ ನೀಡಲಾಗಿದೆ. ನಿನ್ನೆ ಮಾತ್ರ 1,95,554 ಜನರಿಗೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ ಇಪ್ಪತ್ತೆರಡೂವರೆ ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. 45-59 ವರ್ಷ ವಯಸ್ಸಿನ 10.4 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಲಸಿಕೆ ನೀಡಿಕೆಯಲ್ಲಿ ಕರ್ನಾಟಕ 6 ನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದ ನಂತರದ ಸ್ಥಾನದಲ್ಲಿ ನಾವಿದ್ದೇವೆ. ಕೇಂದ್ರ ಸರ್ಕಾರ ನಮ್ಮ ಮನವಿ ಸ್ಪಂದಿಸಿ 15 ಲಕ್ಷ ಡೋಸ್ ಲಸಿಕೆಯನ್ನು ಕಳುಹಿಸಿಕೊಟ್ಟಿದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಸೋಂಕಿತರು ಒಂದೇ ದಿನ ಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆಯೂ ಹೆಚ್ಚುತ್ತಿದ್ದು, ಸೋಮವಾರ ಒಂದೇ ದಿನ 32 ಸಾವಾಗಿದೆ. ಮಧ್ಯವಯಸ್ಕರು, 25 ವರ್ಷದ ಯುವಜನರು ಸಾವಿಗೀಡಾಗಿರುವುದು ಆತಂಕ ಉಂಟುಮಾಡಿದೆ. ಈ ಹಿನ್ನಲೆಯಲ್ಲಿ ಸಾವಿನ ಆಡಿಟ್ ಮಾಡಬೇಕೆಂದು ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಲಾಗಿದೆ. ಮೊದಲ ಅಲೆಗೆ ಹೋಲಿಸಿದರೆ ಎರಡನೇ ಅಲೆ ಬೇಗ ಹರಡುತ್ತಿದೆ. ಇದರ ತೀವ್ರತೆ ಕಡಿಮೆ ಇದೆಯೋ ಅಥವಾ ಹೆಚ್ಚಿದೆಯೋ ಎಂದು ಹೇಳಲು ಈಗಲೇ ಸಾಧ್ಯವಿಲ್ಲ. ಆದರೆ ಅದನ್ನು ಎದುರಿಸಲು ಬೇಕಾದ ಸಿದ್ಧತೆಗಳನ್ನು ಮಾಡಲಾಗಿದೆ ಎಂದರು.

ರಾಜ್ಯಾದ್ಯಂತ 33,697 ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗಾಗಿ ಸಿದ್ಧಪಡಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಹಿತ ಹಾಸಿಗೆಗಳ ಸಂಖ್ಯೆ 15,733 ಇದೆ. ಈ ಪೈಕಿ 10,083 ಹಾಸಿಗೆಗಳನ್ನು ಕೋವಿಡ್ ಗೆ ಮೀಸಲಿಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ 20% ಹಾಸಿಗೆ ಮೀಸಲಿಡಲು ಸೂಚಿಸಲಾಗಿದೆ. ಕೋವಿಡ್ ಪ್ರಕರಣ ಹೆಚ್ಚಿದರೆ ಮತ್ತಷ್ಟು ಹಾಸಿಗೆ ಮೀಸಲಿಡಬೇಕಾಗುತ್ತದೆ. ಕೋವಿಡ್ ಯೇತರ ಚಿಕಿತ್ಸೆಗಳು ಕೂಡ ಮುಖ್ಯವಾಗಿದೆ. ಆದ್ದರಿಂದ ಜನರು ಹೆಚ್ಚು ಎಚ್ಚರ ವಹಿಸಬೇಕು ಎಂದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಬೆಂಗಳೂರು : ಸಂಚಾರಿ ವಿಜಯ್ ಅವರು ನಟನೆಯಲ್ಲಿ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು. ತನ್ನ ನಟನೆಯಿಂದಲೇ ಎಲ್ಲರ ಗಮನ ಸೆಳೆದ ನಟ. ತಾನೊಬ್ಬ ನಟ ಎಂಬ ಹಮ್ಮಿಗಿಂತ ತಾನೊಬ್ಬ ಕಲಾವಿದ ಎಂಬಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಬೆಂಗಳೂರು, (ಜೂ.15) : ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ರಾಜ್ಯ...

ಪ್ರಮುಖ ಸುದ್ದಿ

ಬೆಂಗಳೂರು: ಮೊದಲ ಹಂತದ ಅನ್ಲಾಕ್ ಶುರುವಾಗಿದ್ದು, ಬಿಬಿಎಂಪಿ ಆಟೋ ಚಾಲಕರಿಗೆ ಹೊಸ ರೂಲ್ಸ್ ತಂದಿದೆ. ಈ ರೂಲ್ಸ್ ಪ್ರಕಾರ ಆಟೋ ಡ್ರೈವರ್ ಗಳು ವ್ಯಾಕ್ಸಿನ್ ಹಾಕಿಸಿಕೊಳ್ಳದೆ ಇದ್ರೆ ಆಟೋ ಚಾಲನೆ ಮಾಡುವ ಹಾಗಿಲ್ಲ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿನ್ನೆ ನಿಧನರಾಗಿದ್ದರು. ಇಂದು ರವಿಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿತ್ತು. ಇಂಡಸ್ಟ್ರಿಯಲ್ಲಿ ಎಲ್ಲರೊಟ್ಟಿಗೂ ಬೆರೆಯುತ್ತಿದ್ದ ನಟ....

ಪ್ರಮುಖ ಸುದ್ದಿ

ಇತರರು ತನಗೆ ಸ್ವಲ್ಪ ಕಷ್ಟ ಕೊಟ್ಟರೂ ಕ್ಷಮಾ ಗುಣವು ದೀರ್ಘಾಯಸ್ಸನ್ನು ಕೊಡುತ್ತದೆ. ಇದು ಹೇಗೆ ಸಾಧ್ಯ ಎಂದು ಅಂದುಕೊಳ್ಳುತ್ತಿರುವಿರಾ? ಈ ಮಾತಿಗೆ ಕೆಲವರು ವಿರೋಧವನ್ನು ವ್ಯಕ್ತಪಡಿಸುವವರೂ ಇರುವರು. ಯಾಕೆಂದರೆ ಅಂಥವರ ಪ್ರಕಾರವಾಗಿ ಇತರರ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ಜೂನ್-15,2021 ಮಿಥುನ ಸಂಕ್ರಾಂತಿ ಸೂರ್ಯೋದಯ: 05:52 AM, ಸೂರ್ಯಸ್ತ: 06:45 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಜ್ಯೇಷ್ಠ ಮಾಸ,ಉತ್ತರಾಯಣ, ವಸಂತ ಋತು,...

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6835 ಹೊಸ ಪ್ರಕರಣ ಪತ್ತೆಯಾಗಿದೆ. 31828 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 117914 RTPCR ಟೆಸ್ಟ್ ಸೇರಿದಂತೆ ಒಟ್ಟು,...

error: Content is protected !!