Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣದಲ್ಲಿ ಎಂಪಿ ಪಾತ್ರವೂ ಇದೆ : ಬಿಎಸ್ವೈ ಪುತ್ರನ ಮೇಲೆ ಬೇಳೂರು ಆರೋಪ

---Advertisement---

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ನ ಹಗರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ಸಂಸದ ಬಿವೈ ರಾಘವೇಂದ್ರ ಕೈವಾಡವಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ನಮ್ಮದೇ ಸರ್ಕಾರವಿದೆ‌ ಹೀಗಾಗಿ ಈ ಪ್ರಕರಣ ಸಂಬಂಧ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಡಿಸಿಸಿ ಬ್ಯಾಂಕ್ ನಲ್ಲಿ ದೊಡ್ಡ ಮಟ್ಟದ ಹಗರಣವೇ ನಡೆದಿದೆ. ಒಂದೊಂದು ಹುದ್ದೆಗೂ 40 ಲಕ್ಷ ಡಿಮ್ಯಾಂಡ್ ಮಾಡಿದ್ದಾರೆ. ಹುದ್ದೆ ನೀಡಲು ಅಷ್ಟು ದೊಡ್ಡಮಟ್ಟದ ಲಂಚ ಪಡೆದಿದ್ದಾರೆ. ಲಂಚದ ಹಣಕ್ಕೆ ಬ್ಯಾಂಕ್ ನಲ್ಲಿಯೇ ಸಾಲ ನೀಡಿದ್ದಾರೆ‌. ಈ ಹಗರಣದಲ್ಲಿ ಬಿವೈ ವಿಜಯೇಂದ್ರ ಅವರು ಭಾಗಿಯಾಗಿದ್ದಾರೆಂದು ಬೇಳೂರು ಗೋಪಾಲಕೃಷ್ಣ ಅವರು ಹೇಳಿದ್ದು, ಬಿಜೆಪಿಗರು ಬರ ಅಧ್ಯಯನ ಮಾಡುತ್ತಿದ್ದಾರೆ. ಬರಕ್ಕೆ ಮುಖ್ಯಮಂತ್ರಿಗಳು ಪರಿಹಾರದ ಹಣ ಬಿಡುಗಡೆ ಮಾಡಿದ್ದಾರೆ. ನಿಮ್ಮ ಕಾಲದಲ್ಲಿ ನೆರೆ ಬಂತು, ಏನಾದರೂ ಪರಿಹಾರ ಕೊಟ್ಟಿದ್ದೀರಾ..? ಕೇವಲ ಸಮೀಕ್ಷೆ ಮಾಡಿಕೊಂಡು ಹೋದ್ರಿ. ನಿಮ್ಮ ಪ್ರಧಾನಿ, ನಿಮ್ಮ ಸರ್ಕಾರ ಏನಾದರೂ ಪರಿಹಾರ ಕೊಡ್ತಾ ಎಂದು ಪ್ರಶ್ನಿಸಿದ್ದಾರೆ.

ಇದೆ ವೇಳೆ ಲೋಕಸಭಾ ಚುನಾವಣೆ ಬಗ್ಗೆ ಮಾತನಾಡಿದ್ದು, ನಾನು ಕೂಡ ಪ್ರಬಲ ಆಕಾಂಕ್ಷಿ. ಈ ಬಾರಿ ಲೋಕಸಭೆಗೆ ಸ್ಪರ್ಧಿಸುವ ಆಸೆ ಹೊಂದಿದ್ದೇನೆ. ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಬಳಿ ಚರ್ಚಿಸಿದ್ದೇನೆ. ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಎದುರಿಸಲು, ನಾನೇ ಪ್ರಬಲ ಸ್ಪರ್ಧಿ ಎಂದು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment