Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಸಿಸಿ ಬ್ಯಾಂಕ್ ಬೆಳೆಸಾಲ ಮನ್ನಾ ಮಾಡಲು ಸಂಸದ ಗೋವಿಂದ ಕಾರಜೋಳ ಮನವಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 04 : ಜಿಲ್ಲೆಯ ಡಿಸಿಸಿ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ಅಲ್ಪಾವಧಿ ಬೆಳೆಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಸಂಸದ ಗೋವಿಂದ ಕಾರಜೋಳ ಅವರು ಉಪ ಮುಖ್ಯಮಂತ್ರಿ ಹಾಗೂ ಚಿತ್ರದುರ್ಗ ಜಿಲ್ಲಾ ಪ್ರಕೃತಿ ವಿಕೋಪ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರಲ್ಲಿ ಮನವಿ ಮಾಡಿದರು.


ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪ್ರಕೃತಿ ವಿಕೋಪ ಪರಿಶೀಲನಾ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ಜಿಲ್ಲೆಯ ಡಿಸಿಸಿ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ಅಲ್ಪಾವಧಿ ಬೆಳೆಸಾಲವನ್ನು ಮನ್ನಾ ಮಾಡುವ ಮೂಲಕ ಸಂಕಷ್ಟದಲ್ಲಿರುವ ಸರ್ಕಾರ ರೈತರಿಗೆ ನೆರವಾಗಬೇಕು.

ಪ್ರಸಕ್ತ ಸಾಲಿನಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಸುಮಾರು 70,000 ರೈತರಿಗೆ ಸಾಲ ನೀಡುವ ಗುರಿ ಹೊಂದಲಾಗಿತ್ತು. ಆದರೆ, ಇದುವರೆಗೆ ಕೇವಲ 5,000 ರೈತರಿಗೆ ಮಾತ್ರ ಸಾಲ ವಿತರಿಸಲಾಗಿದೆ. ರೈತರು ಬೆಳೆ ನಷ್ಟದಿಂದ ಕಂಗಾಲಾಗಿದ್ದಾರೆ. ಹೀಗಾಗಿ, ಬೆಳೆ ವಿಮೆಯ ನೂರರಷ್ಟು (100%) ಪ್ರೀಮಿಯಂ ಕಂತನ್ನು ರಾಜ್ಯ ಸರ್ಕಾರವೇ ಭರಿಸಿ ರೈತರಿಗೆ ಆರ್ಥಿಕ ಅನುಕೂಲ ಮಾಡಿಕೊಡಬೇಕು.

ಜಿಲ್ಲೆಯಲ್ಲಿ ಸುಮಾರು 17 ಲಕ್ಷ ಕುರಿ ಮತ್ತು ಮೇಕೆಗಳು ಹಾಗೂ 2.5 ಲಕ್ಷ ದನಕರುಗಳಿವೆ. ಪ್ರಸ್ತುತ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದೆ. ವಿಶೇಷವಾಗಿ ಮಧ್ಯ ಕರ್ನಾಟಕ ಭಾಗದಲ್ಲಿ ಕುರಿ ಸಾಕಾಣಿಕೆಯನ್ನು ಅವಲಂಬಿಸಿರುವ ಶೇ. 90 ರಷ್ಟು ಜನರು ಹಿಂದುಳಿದ ಮತ್ತು ಕಾಡುಗೊಲ್ಲ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇವರ ಜೀವನೋಪಾಯಕ್ಕಾಗಿ ಜಾನುವಾರುಗಳಿಗೆ ಉಚಿತವಾಗಿ ಮೇವು ಮತ್ತು ನೀರಿನ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಬೇಕು ಎಂದು ಸಂಸದ ಗೋವಿಂದ ಕಾರಜೋಳ ವಿನಂತಿ ಮಾಡಿಕೊಂಡರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now