Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸುಮಲತಾ ಇಂದು ಎಸ್ ಎಂ ಕೃಷ್ಣ ಅವರನ್ನು ಭೇಟಿಯಾಗಿದ್ದೇಕೆ..?

---Advertisement---

ಬೆಂಗಳೂರು: ಸಂಸದೆ ಸುಮಲತಾ ಬಿಜೆಪಿ ಸೇರ್ತಾರೆ ಅನ್ನೋ ಮಾತು ಹೀಗಿನದ್ದಲ್ಲ. ಬಹಳ ತಿಂಗಳುಗಳಿಂದ ಈ ವಿಚಾರ ಚರ್ಚೆಯಾಗುತ್ತಲೆ ಇದೆ. ಹಾಗಂತ ಸುಮಲತಾ‌ಕೂಡ ಇಲ್ಲ ಅಂತೇನು ಹೇಳಿಲ್ಲ, ಬದಲಿಗೆ ಜನಾಭಿಪ್ರಾಯ ಮುಖ್ಯ ಅನ್ನೋ ಮಾತನ್ನು ಹೇಳ್ತಾ ಇದ್ದಾರೆ. ಅದರ ಜೊತೆಗೆ ಆಗಾಗ ಬಿಜೆಪಿ ನಾಯಕರ ಜೊತೆಗೆ ಗುರುತಿಸಿಕೊಂಡು ಸುದ್ದಿಯಾಗ್ತಾ ಇರುತ್ತಾರೆ.

ಆದ್ರೆ ಇತ್ತಿಚಿನ ಬೆಳವಣಿಗೆ ನೋಡ್ತಾ ಸುಮಲತಾ ಮನಸ್ಸಲ್ಲಿ ಬಿಜೆಪಿ ಸೇರುವ ಹಂಬಲವಿದೆ ಎಂಬ ಚರ್ಚೆಯಾಗ್ತಾ ಇದೆ. ಈ ಬಾರಿ ಮೋದಿ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಸೇರ್ಪಡೆಯಾಗ್ತಾರೆ ಎಂಬ ಮಾತು ಕೂಡ ಕೇಳಿ ಬರ್ತಾ ಇದೆ. ನಿನ್ನೆಯಷ್ಟೇ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಗುರುತಿಸಿಕೊಂಡಿದ್ದರು. ಜೊತೆಗೆ ಮೋದಿಯವರ ಬಗ್ಗೆ ಹಾಡಿ ಹೊಗಳಿದ್ದರು. ಇದೀಗ ಇಂದು ಹಿರಿಯ ನಾಯಕ ಎಸ್ ಎಂ ಕೃಷ್ಣ ಅವರನ್ನು ಭೇಟಿಯಾಗಿ ಬಮನದಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.

ಇಂದು ಎಸ್ ಎಂ ಕೃಷ್ಣ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಭೇಟಿ ಬಳಿಕ ಮಾತನಾಡಿದ ಸುಮಲತಾ, ಕೃಷ್ಣ ಅವರು ನಮ್ಮ ಹಿರಿಯ ನಾಯಕರು. ಅವರಿಗೆ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಬಂದಿದೆ. ಇವತ್ತು ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದೇನೆ. ಇವತ್ತು ಮಂಡ್ಯದಿಂದ ಹಲವರು ಬಂದಿದ್ದಾರೆ. ಎಲ್ಲರ ಜೊತೆಗೆ ಚರ್ಚೆ ಮಾಡ್ತೇನೆ. ನಾನು ಇನ್ನು ಯಾವುದೇ ತೀರ್ಮಾನ ಮಾಡಿಲ್ಲ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment