Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀಮತಿ ಕೆ.ಮಂಜುಳ ಚಿತ್ರದುರ್ಗ ನಗರಸಭೆಯ ನೂತನ ಉಪಾಧ್ಯಕ್ಷರಾಗಿ ಆಯ್ಕೆ

Facebook
Twitter
Telegram
WhatsApp

 

ಚಿತ್ರದುರ್ಗ(ಜೂ .22) : ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಚಿತ್ರದುರ್ಗ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ 6ನೇ ವಾರ್ಡ್ ನಗರಸಭೆ ಸದಸ್ಯೆ ಕೆ.ಮಂಜುಳಾ ಅವರು ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಅವರು ಚಿತ್ರದುರ್ಗ ನಗರಸಭೆ ಉಪಾಧ್ಯಕ್ಷೆಯಾಗಿ ಕೆ.ಮಂಜುಳಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

ಈ ಹಿಂದೆ ನಗರಸಭೆಯ ಉಪಾಧ್ಯಕ್ಷರಾಗಿದ್ದ ಅನುರಾಧಾ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷ ಸ್ಥಾನವು ಹಿಂದುಳಿದ ವರ್ಗಗಳ “ಎ” ಮೀಸಲಾಗಿದೆ.

ಬುಧವಾರ ಬೆಳಿಗ್ಗೆ 10 ರಿಂದ 11 ರವೆರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ನಗರಸಭೆಯ 6ನೇ ವಾರ್ಡ್ ಸದಸ್ಯೆ ಕೆ.ಮಂಜುಳಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಮಧ್ಯಾಹ್ನ 1ಕ್ಕೆ ಚುನಾವಣಾಧಿಕಾರಿಗಳು ನಾಮಪತ್ರ ಸಲ್ಲಿಕೆಯು ಕ್ರಮಬದ್ಧವಾಗಿದ್ದು, ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಕರ್ನಾಟಕ ಪೌರಸಭೆ ಹಾಗೂ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗಳು-1977 ನಿಯಮಗಳ ಸೆಕ್ಷನ್-1ರ ಅಡಿ ಕೇವಲ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ ಚುನಾವಣೆ ಅವಶ್ಯಕತೆ ಇರುವುದಿಲ್ಲ. ಹಾಗಾಗಿ ಉಪಾಧ್ಯಕ್ಷರ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದರು.

35 ಮಂದಿ ಚುನಾಯಿತ ನಗರಸಭೆ ಸದಸ್ಯರು, ಶಾಸಕರು ಹಾಗೂ ಸಂಸದರು ಸೇರಿ ಒಟ್ಟು 37 ಜನ ಮತದಾನದ ಹಕ್ಕನ್ನು ಹೊಂದಿದ್ದು, ಉಪಾಧ್ಯಕ್ಷರ ಚುನಾವಣಾ ಸಭೆಯಲ್ಲಿ 26 ಮಂದಿ ಸದಸ್ಯರು ಹಾಜರಾಗಿದ್ದರು. 11 ಸದಸ್ಯರು ಗೈರಾಗಿದ್ದರು.

ನಗರಸಭೆ ನೂತನ ಉಪಾಧ್ಯಕ್ಷೆ ಕೆ.ಮಂಜುಳಾ ಮಾತನಾಡಿ, ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವುದಕ್ಕೆ ಸಂತೋಷವಾಗಿದೆ. ಆಯ್ಕೆಯಾಗಲು ಸಹಕರಿಸಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹಾಗೂ ನಗರಸಭೆ ಸದಸ್ಯರಿಗೆ ಧನ್ಯವಾದ ಸಲ್ಲಿಸಿದ ಅವರು, ಚಿತ್ರದುರ್ಗ ನಗರದ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುವುದರ ಮೂಲಕ ನಗರದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು, ವ್ಯವಸ್ಥಾಪಕಿ ಮಂಜುಳಾ, ಕಂದಾಯ ಅಧಿಕಾರಿ ಚಂದ್ರಶೇಖರ್ ಚುನಾವಣಾ ಪ್ರಕ್ರಿಯೆಯ ಕಾರ್ಯನಿರ್ವಹಿಸಿದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ : ವಕೀಲರಿಗೆ ಸನ್ಮಾನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಶ್ರೀ ಶಿವಕುಮಾರ ಕಲಾ ಸಂಘ ಇವರ ಸಂಯುಕ್ತ

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲಿಗೆ ಆ ಐವರು ಕಾರಣವೇ ?

ಸುದ್ದಿಒನ್ | ಮಹಾರಾಷ್ಟ್ರ ಚುನಾವಣೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಕೇವಲ 16 ಸ್ಥಾನಗಳನ್ನು ಗೆದ್ದಿದೆ. ಭಾರೀ ಸೋಲಿನ ನಂತರ ಪಕ್ಷವು ಇವಿಎಂಗಳಿಂದ ನಮಗೆ ಸೋಲಾಗಿದೆ ಎಂದು ದೂರಿದೆ. ಇವಿಎಂಗಳ ದತ್ತಾಂಶದಿಂದಾಗಿ ಚುನಾವಣೆ

RCB ಸೇರ್ತಾರೆ ಅಂದುಕೊಂಡ್ರೆ ಕನ್ನಡಿಗ ರಾಹುಲ್ ಡೆಲ್ಲಿ ಪಾಲು..!

RCB ಕ್ರೇಜ್ ಎಷ್ಟಿದೆ‌ ಎಂಬುದನ್ನು ಬಿಡಿಸಿ ಹೇಳುವ ಅಗತ್ಯವಿಲ್ಲ. ಐಪಿಎಲ್ ಶುರುವಾಗುವ ಮುನ್ನವೇ ಆರ್ಸಿಬಿ ಫೀವರ್ ಅಭಿಮಾನಿಗಳಲ್ಲಿ ಜೋರಾಗಿ ಬಿಡುತ್ತದೆ. ಆರ್ಸಿಬಿ ಅಂದ್ರೆ ಅಷ್ಟು ಪ್ರೀತಿ ಕನ್ನಡಿಗರಿಗೆ. ಈಗ ಆರ್ಸಿಬಿ ಫ್ಯಾನ್ಸ್ ಖುಷಿ ಪಡೋ

error: Content is protected !!