ಬೆಂಗಳೂರು: ಮೂಡಾ ಹಗರಣದಲ್ಲಿ ದೊಡ್ಡ ಸಂಕಷ್ಟವೇ ಬಂದು ಈಗ ತಂಗಾಳಿಯಂತೆ ದೂರವಾಗಿದೆ. ಇಷ್ಟು ವರ್ಷದ ರಾಜಕೀಯ ಜೀವನದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ಕಪ್ಪು ಮಸಿ ಇರಲಿಲ್ಲ. ಆದರೆ ಮೂಡಾ ಕೇಸಲ್ಲಿ ಅವರ ಧರ್ಮಪತ್ನಿಯ ತನಕ ಸಂಕಷ್ಟವಾಗಿತ್ತು. ಸಿಎಂ ಖುರ್ಚಿಗೂ ಸಮಸ್ಯೆ ಎದುರಾಗುವ ಎಲ್ಲಾ ಲಕ್ಷಣಗಳು ಕಂಡು ಬಂದವು. ಆದರೆ ದಿನ ಕಳೆದಂತೆ ಎಲ್ಲವೂ ತಣ್ಣಗಾಗಿತ್ತು. ಇದೀಗ ಎಲ್ಲಾ ಕಳಂಕದಿಂದಾನೂ ಮುಕ್ತರಾಗಿದ್ದಾರೆ ಸಿಎಂ ಸಿದ್ದರಾಮಯ್ಯ ಅವರು.
ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು. ಬಿ ರಿಪೋರ್ಟ್ ಕೂಡ ಸಲ್ಲಿಕೆ ಮಾಡಿದ್ದರು. ಈ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ಒ್ಫಿಗೆ ನೀಡಿದೆ. ಆರೋಪಿಗಳ ಸ್ಥಾನದಲ್ಲಿದ್ದ ಸಿದ್ದರಾಮಯ್ಯ ಅವರು (A1), ಅವರ ಧರ್ಮಪತ್ನಿ ಪಾರ್ವತಿ ಅವರು (A2), ಮಲ್ಲಿಕಾರ್ಜುನ ಸ್ವಾಮಿ (A3), ದೇವರಾಜು (A4) ಅವರಿಗೆ ಕೋರ್ಟ್ ಆದೇಶದಿಂದ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ. ಈ ಸಂಬಂಧ ಉಳಿದ ಆರೋಪಿಗಳ ವಿರುದ್ಧ ತನಿಖೆ ಮುಂದುವರೆಸುವಂತೆ ಕೋರ್ಟ್ ಸೂಚನೆ ನೀಡಿದೆ.
ಈ ಹಿಂದೆ ಲೋಕಾಯುಕ್ತ ಪೊಲೀಸರು ಸಾಕಷ್ಟು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದರು. ಆದರೆ ಯಾಕೆ ಅಂತಿಮ ವರದಿ ಸಲ್ಲಿಕೆ ಮಾಡುತ್ತಿಲ್ಲ ಎಂದು ಜಡ್ಜ್ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ್ದ ಲೋಕಾಯುಕ್ತ ವಿಶೆರಷ ಸರ್ಕಾರಿ ಅಭಿಯೋಜಕ, ಈಗಾಗಲೇ ಅಂತಿಮ ವರದಿ ತಯಾರಿ ಆಗಿದೆ. ಅನುಮತಿ ಸಿಗದ ಕಾರಣ ಸಲ್ಲಿಕೆ ಮಾಡುತ್ತಿಲ್ಲ. ಸ್ವಲ್ಪ ಸಮಯ ನೀಡಿದೃ ಸೀಲ್ಡ್ ಕವರ್ ನಲ್ಲಿ ವರದಿಯನ್ನು ಸಲ್ಲಿಸುವುದಕ್ಕೆ ಸಿದ್ಧ ಎಂದು ಹೇಳಿತ್ತು. ವರದಿಯೂ ಸಲ್ಲಿಕೆಯಾಗಿದ್ದು, ಕೋರ್ಟ್ ವಾದ ಪ್ರತಿವಾದ ಆಲಿಸಿ, ಸಿದ್ದರಾಮಯ್ಯ ಕುಟುಂಬಕ್ಕೆ ಕಳಂಕ ಮುಕ್ತ ಮಾಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











