Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಕೇಸ್ : ಸಿಎಂ ಹಾಗೂ ಕುಟುಂಬ ರಕ್ಷಣೆಗೆ ಲೋಕಾಯುಕ್ತ ಸುಳ್ಳು ರಿಪೋರ್ಟ್ : ಸಿಡಿದೆದ್ದ ಸ್ನೇಹಮಯಿ

---Advertisement---

ಬೆಂಗಳೂರು: ಮೂಡಾ ಪ್ರಕರಣ ಸಂಬಂಧ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ. ಈ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಅವರು ಪ್ರಶ್ನೆ ಮಾಡಿದ್ದರು‌‌. ಅದರ ಸಂಬಂಧ ಅರ್ಜಿ ವಿಚಾರಣೆ ಇಂದು ಇತ್ತು. ಹೀಗಾಗಿ ಲೋಕಾಯುಕ್ತದ ಮೇಲೆಯೇ ಸ್ನೇಹಮಯಿ ಕೃಷ್ಣ ಅವರು ಗರಂ ಆಗಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಸುಳ್ಳು ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಅದಕ್ಕೆ ಸಂಬಂಧ ಪಟ್ಟಂತೆ ತಕರಾರು ಅರ್ಜಿಯನ್ನು ಸಲ್ಲಿಕೆ ಮಾಡಿದೆ. ಸಾಕ್ಷ್ಯಾಧಾರಗಳು ಇದ್ದರು ಸಹ ಲೋಕಾಯುಕ್ತ ಅಧಿಕಾರಿಗಳು ಸಿದ್ದರಾಮಯ್ಯ ಅವರ ಕುಟುಂಬವನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ, ಸುಳ್ಳು ವರದಿಯನ್ನ ಸಲ್ಲಿಕೆ ಮಾಡಿದ್ದಾರೆ. ನಾನು ಅದನ್ನ ಗಮನಕ್ಕೆ ತಂದು ಆ ಅರ್ಜಿಯನ್ನ ತಿರಸ್ಕಾರ ಮಾಡಿ, ಅವರ ಮೇಲೆ ಮಾಡಿರುವ ಆರೋಪವನ್ನ ಸಾಬೀತುಪಡಿಸುವುದಕ್ಕೆ ಅನುಮತಿ ಕೊಡಿ ಎಂದು ಕೇಳಿದ್ದೆ. ಅದಕ್ಕೆ ಸಂಬಂಧಿಸಿದಂತೆ ಇಂದು ಆದೇಶ ಇಟ್ಟುಕೊಂಡಿದ್ದಾರೆ.

ಇವತ್ತು ಆದೇಶ ಆಯ್ತು ಅಂದಾದರೆ ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ಅವಕಾಶ ಮಾಡಿಕೊಡ್ತಾರೆ. ಇವತ್ತು ಲೋಕಾಯುಕ್ತ ಅಧಿಕಾರಿಗಳಿಗೆ ಅಂತಿಮ ಅನುಮತಿ ಸಲ್ಲಿಕೆ ಮಾಡಲು ಹೇಳಿದೆ. 16ರ ಒಳಗೇನೆ ಸಲ್ಲಿಸುವುದಕ್ಕೆ ಹೇಳಿದ್ದರು, ಅವರು ಸಲ್ಲಿಸಿಲ್ಲ. ಇವತ್ತು ದುರುದ್ದೇಶಪೂರಕವಾಗಿ ಸಲ್ಲಿಸುತ್ತಾರೆ ಎಂಬ ಮಾಹಿತಿ ಬಂದಿದೆ. ಅವರು ಏನೇ ಸಲ್ಲಿಸಿದರು‌ ಮಾನ್ಯ ನ್ಯಾಯಾಲಯವು ಅವರು ಸಲ್ಲಿಕೆ ಮಾಡಿರುವ ಬಿ ರಿಪೋರ್ಟ್ ವರದಿ ಬಗ್ಗೆ ತೀರ್ಮಾನ ಮಾಡುತ್ತೆ ಎಂಬ ನಂಬಿಕೆ ಇದೆ. ತನಿಖೆಯಲ್ಲಿ ಸಾಕಷ್ಟು ಲೋಪದೋಷಗಳು ಕಾಣಿಸ್ತಾ ಇದೆ. ಪ್ರಮುಖವಾಗಿ ಎರಡು ದಾಖಲೆಗಳನ್ನ ನೋಡಿದರೇನೆ ಗೊತ್ತಾಗಿ ಬಿಡುತ್ತದೆ ಎಂದು ಸ್ನೇಹಮಯಿ ಕೃಷ್ಣ ಅವರು ಮತ್ತೆ ವಾದ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now