Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಡಾ ಪ್ರಕರಣ : ಸುಪ್ರೀಂ ಕೋರ್ಟ್ ಆದೇಶ ಕೇಂದ್ರ ಸರ್ಕಾರದ ಕಪಾಳಕ್ಕೆ ಬಾರಿಸಿರುವ ತಪರಾಕಿ : ಸಿ.ಎಂ. ಸಿದ್ದರಾಮಯ್ಯ

---Advertisement---

 

ಬೆಂಗಳೂರು, ಜುಲೈ. 21 : ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿಯಾಗಿದೆ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ X ವೇದಿಕೆಯಲ್ಲಿ ಹೇಳಿಕೆ ನೀಡಿರುವ ಅವರು,
ಸುಪ್ರೀಂಕೋರ್ಟ್ ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದಚಂದ್ರ ಅವರ ಆದೇಶವನ್ನು ನಾನು ವಿನೀತನಾಗಿ ಸ್ವಾಗತಿಸುತ್ತೇನೆ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ನಾನು ಸದಾ ಸಂವಿಧಾನ ಮತ್ತು ನೆಲದ ಕಾನೂನಿಗೆ ತಲೆಬಾಗುತ್ತಾ ಬಂದವನು. ಈ ನಂಬಿಕೆಯನ್ನು ಸುಪ್ರೀಂ ಕೋರ್ಟ್ ಆದೇಶ ಉಳಿಸಿಕೊಂಡು ಕಾಪಾಡಿದೆ.

ರಾಜಕೀಯವಾಗಿ ನನ್ನನ್ನು ಎದುರಿಸಲಾಗದ ಭಾರತೀಯ ಜನತಾ ಪಕ್ಷ ಮತ್ತು ಅದರ ಸಂಗಾತಿಗಳು ಸಾಂವಿಧಾನಿಕ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಇಡಿಯನ್ನು ದುರ್ಬಳಕೆ ಮಾಡಿಕೊಂಡು ನನ್ನ ಪತ್ನಿಯ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ನೀಡಿರುವ ಕಿರುಕುಳ ಅತ್ಯಂತ ಹೇಯವಾದುದು. ಇದರಿಂದ ನಾನು ಮತ್ತು ನನ್ನ ಕುಟುಂಬ ಅನುಭವಿಸಿದ ಮಾನಸಿಕವಾದ ಕಿರುಕುಳವನ್ನು ನಾನೆಂದೂ ಮರೆಯಲಾರೆ.

ನನ್ನ ಮನದಾಳದ ಮಾತನ್ನೇ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾದ ಗೌರವಾನ್ವಿತ ಗವಾಯಿ ಅವರು ಹೇಳಿದ್ದಾರೆ. ‘’ರಾಜಕೀಯ ಸಮರಕ್ಕೆ ಮತದಾರರನ್ನು ಬಳಸಕೊಳ್ಳಬೇಕೇ ಹೊರತು, ಇದಕ್ಕಾಗಿ ಜಾರಿ ನಿರ್ದೇಶನಾಲಯದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಬಾರದು‘’ ಎಂಬ ಅವರ ಮಾತುಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜ್ಞಾವಂತ ಭಾರತೀಯನ ಅಭಿಪ್ರಾಯವಾಗಿದೆ.

ಕಳೆದ 10-11 ವರ್ಷಗಳಿಂದ ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಐಟಿ, ಸಿಬಿಐ ಮತ್ತು ಇಡಿಯ ದುರ್ಬಳಕೆ ಮೂಲಕ ಸಾಧಿಸುತ್ತಿರುವ ರಾಜಕೀಯ ದ್ವೇಷಕ್ಕೆ ಬಲಿಯಾದವರೆಲ್ಲರಲ್ಲಿಯೂ ಈ ತೀರ್ಪು ಸಮಾಧಾನ ಉಂಟುಮಾಡಿದೆ ಮತ್ತು ನ್ಯಾಯ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ.

ಸುಪ್ರೀಂಕೋರ್ಟ್‌ನ ಈ ಕಣ್ಣುತೆರೆಸುವ ಆದೇಶದ ನಂತರವಾದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು ಎಚ್ಚೆತ್ತುಕೊಂಡು ಐಟಿ, ಸಿಬಿಐ ಮತ್ತು ಇ.ಡಿ.ಯಂತಹ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯನ್ನು ನಿಲ್ಲಿಸಿ ಅವುಗಳಿಗೆ ಇರಬೇಕಾಗಿರುವ ಸ್ವಾಯತ್ತತೆಯನ್ನು ಕೊಟ್ಟು ತಮ್ಮ ಪಾಪ ತೊಳೆದುಕೊಳ್ಳಬೇಕು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಕಪೋಲಕಲ್ಪಿತ ಆರೋಪಗಳನ್ನು ಮಾಡುತ್ತಾ ಬಂದಿರುವ ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ನಾಯಕರಲ್ಲಿ ಕಿಂಚಿತ್ತಾದರೂ ಮಾನ-ಮರ್ಯಾದೆ ಎನ್ನುವುದು ಉಳಿದುಕೊಂಡಿದ್ದರೆ ಅವರೆಲ್ಲರೂ ತಕ್ಷಣ ತಮ್ಮ ತಪ್ಪಿಗಾಗಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment