Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಕೇಸ್ : ಸಿಬಿಐಗೆ ವರ್ಗಾಯಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

---Advertisement---

ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದ ಕೇಸನ್ನು ಸಿಬಿಐಗೆ ನೀಡುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಈ ಅರ್ಜಿಯನ್ನು ಹಾಕಿದ್ದರು. ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸದಸ್ಯ ಪೀಠ ಜನವರಿ 27ಕ್ಕೆ ಮುಂದೂಡಿಕೆ ಮಾಡಿದೆ. ವಾದ ಪ್ರತಿ ವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

ವಿಚಾರಣೆಯ ಆರಂಭದಲ್ಲಿಯೇ ಹೈಕೋರ್ಟ್ ಎರೆಉ ಕಡೆಯ ವಕೀಲರಿಗೆ ಒಂದು ಸೂಚನೆ ನೀಡಿತ್ತು. ಈ ಕೇಸನ್ನ ಸಿಬಿಐಗೆ ಕೊಡಬೇಕಾ..? ಬೇಡವಾ ಎಂಬುದರ ಬಗ್ಗೆ ವಾದ ಸೀಮಿತಗೊಳಿಸಿ ಎಂದು ತಿಳಿಸಿತ್ತು. ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲ ಪ್ರೋ.ರವಿವರ್ಮ ಕುಮಾರ್ ಹಾಗೂ ಮನು ಸಿಂಘ್ವಿ ವಾದ ಮಂಡಿಸಿದರು. ಸರ್ಕಾರದ ಪರವಾಗಿ ಕಪಿಲ್ ಸಿಬಲ್, ಎಜೆ ಶಶಿಜಿರಣ್ ಮತ್ತು ಹಿಂದಿನ ಭೂ ಮಾಲೀಕ ದೇವರಾಜು ಪರ ದುಷ್ಯಂತ್ ದವೆ, ಸ್ನೇಹಮಯಿ ಕೃಷ್ಣ ಪರವಾಗಿ ಮಣಿಂದರ್ ಸಿಂಗ್ ಅವರು ವಾದ ಮಂಡಿಸಿದರು.

ಇನ್ನು ಹೈಕೋರ್ಟ್ ಏಕ ಸದಸ್ಯ ಪೀಠದ ನ್ಯಾ.ಎಂ ನಾಗಪ್ರಸನ್ನ ಅವರು ವಾದ ಪ್ರತಿವಾದ ಆಲಿಸಿ, ಲೋಕಾಯುಕ್ತ ಪೊಕೀಸರ ಪರ ವಕೀಲ ವೆಂಕಟೇಶ್ ಅರಬಟ್ಟಿ ಅವರಿಗೆ ಸೂಚನೆ ನೀಡಲಾಯ್ತು. ಈವರೆಗೆ ತನಿಖೆಯ ವರದಿ ಸಲ್ಲಿಸಿಲ್ಲವೇಕೆ ಎಂದು ಪ್ರಶ್ನಿಸಿ, ನಾಳೆಯ ಒಳಗೆ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ವರದಿಯನ್ನು ಮುಂದಿನ ವಿಚಾರಣೆಗೂ ಒಂದು ದಿನ ಮುನ್ನ ಸಲ್ಲಿಸಬೇಕು. ಅಲ್ಲಿಯವರೆಗೂ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಬಹುದು ಎಂದಯ ನ್ಯಾಯಪೀಠ ತಿಳಿಸಿದೆ. ಈ ಸಂಬಂಧ ಜನವರಿ 27ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...