ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರಿಗೆ ಉರುಳಾಗಿದ್ದ ಮೂಡಾ ಕೇಸ್ ತನಿಖೆ ಮುಕ್ತಾಯವಾಗಿದ್ದು, ಇಂದು ಲೋಕಾಯುಕ್ತ ಪೊಲೀಸರು ಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ, ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಹಾಗೂ ಭಾಮೈದ ಮಲ್ಲಿಕಾರ್ಜುನ ಸ್ವಾಮಿಗೆ ಮೂಡಾ ಕೇಸ್ ನಿಂದ ಕ್ಲೀನ್ ಚಿಟ್ ಸಿಕ್ಕಂತೆ ಆಗಿದೆ. ದೂರುದಾರ ಸ್ನೇಹಮಯಿ ಕೃಷ್ಣಗೆ ಈಗಾಗಲೇ ಬಿ ರಿಪೋರ್ಟ್ ಸಲ್ಲಿಕೆ ಬಗ್ಗೆಯೂ ನೋಟೀಸ್ ನೀಡಿದ್ದಾರೆ.

ಇನ್ನು ಬಿ ರಿಪೋರ್ಟ್ ನಲ್ಲಿ ಏನೆಲ್ಲಾ ಅಂಶಗಳಿವೆ ಎಂಬುದನ್ನು ನೋಡೋದಾದ್ರೆ, 82ನೇ ಸಿಸಿಹೆಚ್ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ರಿಪೋರ್ಟ್ ಸಲ್ಲಿಕೆ ಮಾಡಲಾಗುತ್ತಿದೆ. ಈ ವರದಿಯಲ್ಲಿ 50ಕ್ಕೂ ಹೆಚ್ಚು ಜನರ ಸಾಕ್ಷಿಗಳನ್ನ ಸಂಗ್ರಹ ಮಾಡಲಾಗಿದೆ. ಲೋಕಾಯುಕ್ತ ಎಸ್ಪಿ ಉದೇಶ್ ಅವರು ಕೋರ್ಟ್ ಗೆ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.

ವರದಿಯಲ್ಲಿ 8 ಸಾವಿರ ಪುಟಗಳಿದ್ದು, ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ವರದಿಯನ್ನು ಸ್ವೀಕಾರ ಮಾಡಿದೆ. ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ನೇತೃತ್ವದ ಪೀಠ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ. ಮೂಲ ಜಮೀನು ಮಾಲೀಕ ದೇವರಾಜ್ ಗೂ ಕ್ಲೀನ್ ಚಿಟ್ ನೀಡಲಾಗಿದೆ. ಡಾಕ್ಯುಮೆಂಟ್ ಸೇರಿದ್ರೆ ಒಟ್ಟು 11 ಸಾವಿರ ಪುಟಗಳಷ್ಟು ವರದಿ ಸಲ್ಲಿಕೆಯಾಗಿದೆ. ಆದರೆ ಇನ್ನು ಮೂಡಾ ಸೈಟ್ ಪ್ರಕರಣದ ವರದಿ ಮುಂದುವರೆಯಲಿದೆ. ಈ ಕೇಸಲ್ಲಿ ಸಿದ್ದರಾಮಯ್ಯ ಅವರು ದೂಷಿ ಅಲ್ಕ ಎಂಬುದು ತಿಳಿದು ಬಂದ ಮೇಲೆ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರು ಇನ್ನಷ್ಟು ಸ್ಟ್ರಾಂಗ್ ಆಗಿದ್ದಾರೆ.

