Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಕೇಸ್ : ಕೋರ್ಟ್ ಗೆ ಸಲ್ಲಿಕೆಯಾದ ಬಿ ರಿಪೋರ್ಟ್ ನಲ್ಲಿ ಏನೆಲ್ಲಾ ಇದೆ..?

---Advertisement---

ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರಿಗೆ ಉರುಳಾಗಿದ್ದ ಮೂಡಾ ಕೇಸ್ ತನಿಖೆ ಮುಕ್ತಾಯವಾಗಿದ್ದು, ಇಂದು ಲೋಕಾಯುಕ್ತ ಪೊಲೀಸರು ಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ, ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಹಾಗೂ ಭಾಮೈದ ಮಲ್ಲಿಕಾರ್ಜುನ ಸ್ವಾಮಿಗೆ ಮೂಡಾ ಕೇಸ್ ನಿಂದ ಕ್ಲೀನ್ ಚಿಟ್ ಸಿಕ್ಕಂತೆ ಆಗಿದೆ. ದೂರುದಾರ ಸ್ನೇಹಮಯಿ ಕೃಷ್ಣಗೆ ಈಗಾಗಲೇ ಬಿ ರಿಪೋರ್ಟ್ ಸಲ್ಲಿಕೆ ಬಗ್ಗೆಯೂ ನೋಟೀಸ್ ನೀಡಿದ್ದಾರೆ.

ಇನ್ನು ಬಿ ರಿಪೋರ್ಟ್ ನಲ್ಲಿ ಏನೆಲ್ಲಾ ಅಂಶಗಳಿವೆ ಎಂಬುದನ್ನು ನೋಡೋದಾದ್ರೆ, 82ನೇ ಸಿಸಿಹೆಚ್ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ರಿಪೋರ್ಟ್ ಸಲ್ಲಿಕೆ ಮಾಡಲಾಗುತ್ತಿದೆ. ಈ ವರದಿಯಲ್ಲಿ 50ಕ್ಕೂ ಹೆಚ್ಚು ಜನರ ಸಾಕ್ಷಿಗಳನ್ನ ಸಂಗ್ರಹ ಮಾಡಲಾಗಿದೆ. ಲೋಕಾಯುಕ್ತ ಎಸ್ಪಿ ಉದೇಶ್ ಅವರು ಕೋರ್ಟ್ ಗೆ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.

ವರದಿಯಲ್ಲಿ 8 ಸಾವಿರ ಪುಟಗಳಿದ್ದು, ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ವರದಿಯನ್ನು ಸ್ವೀಕಾರ ಮಾಡಿದೆ. ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ನೇತೃತ್ವದ ಪೀಠ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ‌. ಮೂಲ ಜಮೀನು ಮಾಲೀಕ ದೇವರಾಜ್ ಗೂ ಕ್ಲೀನ್ ಚಿಟ್ ನೀಡಲಾಗಿದೆ. ಡಾಕ್ಯುಮೆಂಟ್ ಸೇರಿದ್ರೆ ಒಟ್ಟು 11 ಸಾವಿರ ಪುಟಗಳಷ್ಟು ವರದಿ ಸಲ್ಲಿಕೆಯಾಗಿದೆ. ಆದರೆ ಇನ್ನು ಮೂಡಾ ಸೈಟ್ ಪ್ರಕರಣದ ವರದಿ ಮುಂದುವರೆಯಲಿದೆ. ಈ ಕೇಸಲ್ಲಿ ಸಿದ್ದರಾಮಯ್ಯ ಅವರು ದೂಷಿ ಅಲ್ಕ ಎಂಬುದು ತಿಳಿದು ಬಂದ ಮೇಲೆ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರು ಇನ್ನಷ್ಟು ಸ್ಟ್ರಾಂಗ್ ಆಗಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment