Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಗೋಲ್ಮಾಲ್ ವಿಚಾರ : ಸಿಎಂ ₹4,000 ಕೋಟಿ ಗುಳುಂ : ಆರ್ ಅಶೋಕ್ ವಾಗ್ದಾಳಿ..!

---Advertisement---

 

ಬೆಂಗಳೂರು: ಮೂಡಾ ಗೋಲ್ಮಾಲ್ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್, ಗೋಲ್ಮಾಲ್ ಸಿಎಂ ₹4,000 ಕೋಟಿ ಗುಳುಂ ಎಂದು ಆಕ್ರೋಶ ಹೊರ ಹಾಕಿದ್ದಾರೆ.

 

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನ ಗುಳುಂ ಮಾಡಿರುವ ‘ಸಿದ್ಧ’ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ‘ಕೈ’ಚಳಕ ಪ್ರದರ್ಶನ ಮಾಡಿದ್ದಾರೆ. ಗೋಲ್ಮಾಲ್ ಸಿಎಂ @siddaramaiah ನವರೇ, ಈ ಪ್ರಶ್ನೆಗಳಿಗೆ ನಿಮ್ಮ ಬಳಿ ಉತ್ತರವಿದೆಯೇ?.

 

1.) ಗೋಲ್ಮಾಲ್ ಸಿಎಂ @siddaramaiah ನವರೇ, ತಮ್ಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ?

2.) ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನ ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ?

3.) 4,000 ಕೋಟಿ ರೂಪಾಯಿ ಮೌಲ್ಯದ ಈ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನ ಅಸಲಿಗೆ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನ ನೇಮಿಸಿ ಪ್ರಕರಣವನ್ನ ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ್ಮ ಪಾಲೆಷ್ಟು?

4.) 50:50 ಅನುಪಾತ ಹಂಚಿಕೆಗೆ ಅನುಮತಿ ನೀಡಿದ್ದು ಯಾರು?

5.)ಪರ್ಯಾಯ ನಿವೇಶನ ನೀಡುವಾಗ ಅದೇ ಬಡಾವಣೆ ಬಿಟ್ಟು ಲಾಭದ ಬಡಾವಣೆಗಳಲ್ಲಿ ಅವಕಾಶಕ್ಕೆ ಶಿಫಾರಸ್ಸು ಮಾಡಿದ್ದು ಯಾರು?

6.) ಸಚಿವ ಸಂಪುಟದ ಅನುಮತಿ ಪಡೆಯದೆ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು?

7.) ನಿಮ್ಮ ತವರು ಜಿಲ್ಲೆಯಲ್ಲಿ, ಸ್ವಂತ ಊರಿನಲ್ಲಿ, ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂಥದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೆ, ತಮ್ಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment