ಬೆಂಗಳೂರು; ಲೋಕಾಯುಕ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿ ಬಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನೆ ಮಾಡಿ, ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಕುರಿತು ಆದೇಶ ಸದ್ಯಕ್ಕೆ ಇಲ್ಲ. ತನಿಖೆ ಮುಂದುವರೆಸುವಂತೆ ಲೋಕಾಯುಕ್ತ ಪೊಲೀಸರಿಗೆ ನ್ಯಾ.ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ ಸೂಚನೆ ನೀಡಿದೆ.

ಕೋರ್ಟ್ ಮೇ 7ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಇದರ ನಡುವೆ ಜಾರಿ ನಿರ್ದೇಶನಾಲಯ ಕೂಡ ತಕರಾರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಲೋಕಾಯುಕ್ತ ಪೊಲೀಸರ ಅಂತಿಮ ವರದಿಯ ಬಳಿಕವೇ ಬಿ ರಿಪೋರ್ಟ್ ಬಗ್ಗೆ ತೀರ್ಮಾನ ಮಾಡಲಾಗುವುದು. ಲೋಕಾಯುಕ್ತ ಪೊಲೀಸರು ಇನ್ನು ತನಿಖೆಯನ್ನು ಪೂರ್ಣಗೊಳಿಸದ ಕಾರಣ ತನಿಖೆಯನ್ನು ಮುಂದುವರೆಸಲು ಸೂಚನೆ ನೀಡಲಾಗಿದೆ.
ಈ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಟ ಅವರು 39 ಪುಟಗಳ ತಕರಾರು ಅರ್ಜಿಯನ್ನು ಸಲ್ಲಿಕೆ ಮಾಡಿದ್ದರು. ತನಿಖಾಧಿಕಾರಿ ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿ ನನ್ನ ಪ್ರಕಾರ ಈ ಪ್ರಕರಣಕ್ಕೆ ಸಂಬಂಧಿಸಿದ ಬಿ ಅಂತಿಮ ವರದಿಯಾಗಿಲ್ಲ. ಬಿ ಅಂತಿನ ವರದಿ ಸಲ್ಲಿಸಿದ್ದರು ಕೂಡ ಮಾನ್ಯ ನ್ಯಾಯಾಲಯ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿ, ವಿಚಾರಣೆ ಮಾಡಬಹುದು ಎಂದು ಸರ್ವೋಚ್ಚ ನ್ಯಾಯಾಲಯವೂ ತಿಳಿಸಿದೆ. ತೀರ್ಪಿನ ಪ್ರತಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದು ಅದರಲ್ಲಿನ ಅಂಶಗಳನ್ನು ಪರಿಗಣಿಸಿ, ಸೂಕ್ತ ಆದೇಶ ಮಾಡಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದು ತಕರಾರು ಸಲ್ಲಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















