ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂದಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೂ ಸಂಕಷದಟ ಎದುರಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜಾರಿ ನಿರ್ದೇಶನಾಲಯ ನೀಡಿದ್ದಂತ ನೋಟೀಸ್ ಸಂಬಂಧ ನಡೆದ ಅರ್ಜಿ ವಿಚಾರಣೆಯಲ್ಲಿ ಪಾರ್ವತಮ್ಮ ಅವರಿಗೆ ರಿಲೀಫ್ ಸಿಕ್ಕಿದೆ.
ಪಾರ್ವತಿ ಅವರಿಗೆ ಇಡಿ ನೀಡಿದ್ದಂತ ನೋಟೀಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಬಳಿಕ ಜಾರಿ ನಿರ್ದೇಶನಾಲಯವೂ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಡಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇಡಿಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವುದಕ್ಕೆ ತರಾಟೆ ಕೂಡ ತೆಗೆದುಕೊಂಡಿದೆ.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯೊ ಅವರಿದ್ದ ಪೀಠವೂ, ದಯವಿಟ್ಟು ನಾವು ಬಾಯಿ ತೆರೆಯುವಂತೆ ಮಾಡಬೇಡಿ. ಹಾಗೆ ಮಾಡಿದರೆ, ನಾವೂ ಇಡಿ ಬಗ್ಗೆ ಕೆಲವು ಕಟುವಾದ ಟೀಕೆಗಳನ್ನು ಮಾಡಬೇಕಾಗಬಹುದು. ದುರಾದೃಷ್ಟವಶಾತ್ ನನಗೆ ಮಹಾರಾಷ್ಟ್ರದಲ್ಲಿ ಸ್ವಲ್ಪ ಅನುಭವವುದೆ. ನೀವೂ ಈಗ ದೇಶಾದ್ಯಂತ ಈ ರೀತಿಯ ವರ್ತನೆ ಮುಂದುವರೆಸಬಾರದು. ರಾಜಕೀಯ ಪೈಪೋಟಿಯನ್ನು ಏನಿದ್ದರೂ ಮತದಾರರ ಎದುರು ಮಾಡಿಕೊಳ್ಳಲಿ. ಇಡಿಯನ್ನು ಏಕೆ ಬಳಸಲಾಗುತ್ತಿದೆ. ಏಕಸದಸ್ಯ ಪೀಠದ ತೀರ್ಪಿನಲ್ಲಿ ನಮಗೆ ಯಾವುದೇ ಥರದ ಲೋಪ ಕಂಡು ಬಂದಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸುತ್ತಿದ್ದೇವೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಈ ಕೇಸ್ ನಲ್ಲಿ ಇಡಿ ಪಾರ್ವತೀ ಅವರು ಹಾಗೂ ಭೈರತಿ ಸುರೇಶ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಕೋರ್ಟ್ ಅರ್ಜಿಯನ್ನು ತಿರಸ್ಕಾರ ಮಾಡಿದ್ದು, ಪಾರ್ವತಿ ಅವರಿಗೆ ಹಾಗೂ ಭೈರತಿ ಸುರೇಶ್ ಅವರಿಗೆ ನಿರಾಳವಾದಂತಾಗಿದೆ.















