ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಭೂ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ನಡೆಸುತ್ತಿದೆ. ಇದೀಗ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ಜಾರಿ ಮಾಡಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ರಾಜಕೀಯ ಪಿತೂರಿ ಎಂದಿದ್ದಾರೆ.
ರಾಜಕೀಯ ಪಿತೂರಿಯಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಹಾಗುಹ ಸಚುವ ಭೈರತಿ ಸುರೇಶ್ ಅವರಿಗೆ ಇಡಿ ನೋಟೀಸ್ ನೀಡಿದೆ. ನನ್ನ ವಿರುದ್ಧ ಪ್ರಕರಣದಲ್ಲೂ ಹೀಗೆ ಆಗಿತ್ತು. ಒಂದು ಪ್ರಕರಣವನ್ನು ಒಂದೇ ಸಮಯಕ್ಕೆ ಎರಡು ಸಂಸ್ಥೆಗಳು ತನಿಖೆ ನಡೆಸುವುದಕ್ಕೆ ಸಾಧ್ಯವಿಲ್ಲ. ಲೋಕಾಯುಕ್ತ ಈಗಾಗಲೇ ತನಿಖೆ ನಡೆಸುತ್ತಿದೆ. ಲೋಕಾಯುಕ್ತ ತನಿಖೆ ಮಾಡುತ್ತಿರುವಾಗಲೇ ಬೇರೆ ಸಂಸ್ಥೆಗಳು ತನಿಖೆ ನಡೆಸುವುದಕ್ಕೆ ಸಾಧ್ಯವಿಲ್ಲ ಎಂದು ನ್ಯಾಯಾಲಯವು ಅನೇಕ ತೀರ್ಪು ನೀಡಿದೆ. ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದ ಬಳಿಕ ನಾನು ಮಾತನಾಡುತ್ತೇನೆ ಎಂದಿದ್ದಾರೆ.
ಇದೇ ವೇಳೆ ಸರ್ಕಾರದ ಬಗ್ಗೆ ಮಾತನಾಡಿ, ಸರ್ಕಾರ ಸುಭದ್ರವಾಗಿದೆ. ನಾವೆಲ್ಲ ಸಿಎಂ ಸಿದ್ದರಾಮಯ್ಯ ಅವರ ಕೆಳಗೆ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ. ಇದೆ ವೇಳೆ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ ಹಣವನ್ನು ಕೇಂದ್ರ ಸರ್ಕಾರ ನೀಡುತ್ತಾ ಎಂದು ಕೇಳಿದಾಗ, ನೋಡೋಣಾ ರಾಜ್ಯದಿಂದ ಇಷ್ಟೊಂದು ಸಂಸದರು ಇದ್ದಾರೆ. ಕರ್ನಾಟಕ ರಾಜ್ಯಕ್ಕೆ ಮೋಸ ಮಾಡಲ್ಲ ಎಂಬ ನಂಬಿಕೆ ಮೇಲೆ ಕೇಳಿದ್ದೇವೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಒಂದೇ ದಿನದಲ್ಲಿ ಮೇಕೆದಾಟು ಯೋಜನೆಗೆ ಮೋದಿಯವರಿಂದ ಸಹಿ ಹಾಕಿಸುವುದಾಗಿ ಹೇಳಿದ್ದರು. ಅದಕ್ಕಾಗಿ ಕಾಯ್ತಾ ಇದ್ದೇವೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















