ಬೆಂಗಳೂರು: ರಾಜ್ಯದಲ್ಲಿ ಮೂಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಸಿದ್ದರಾಮಯ್ಯ ಅವರ 40 ವರ್ಷದ ರಾಜಕೀಯ ಜೀವನದಲ್ಲಿ ಇಂಥದ್ದೊಂದು ಘಟನೆ ಎದುರಾಗಿರುವುದೇ ಈಗ. ರಾಜ್ಯಪಾಲರು ಕೂಡ ಕೇಸನ್ನ ಪ್ರಾಸಿಕ್ಯೂಷನ್ ಗೆ ನೀಡಿದ್ದರು. ಈ ಸಂಬಂಧ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಹೋಗಿದ್ದರು. ಹೈಕಮಾಂಡ್ ನಾಯಕರ ಜೊತೆಗೆ ಮಾತುಕತೆ ನಡೆಸಿ ಬಂದಿದ್ದಾರೆ.
ಬೆಂಗಳೂರಿಗೆ ಬರ್ತಿದ್ದಂತೆ ಹೈಕಮಾಂಡ್ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಸಿದ್ದರಾಮಯ್ಯ ಅವರು ಭೇಟಿಯಾಗಿದ್ದರು. ಮೂಡಾ ಕೇಸ್ ಬಗ್ಗೆ ಸುಧೀರ್ಘ ಚರ್ಚೆ ನಡೆಸಿದರು. ಈ ಸಭೆ ಮುಗಿಸಿಕೊಂಡು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಬಂದಿದ್ದಾರೆ.
ನಮ್ಮ ಹೈಕಮಾಂಡ್ ನಾಯಕರುಗಳಿಗೆ ನನ್ನ ಧನ್ಯವಾದಗಳು. ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ರಾಜ್ಯಪಾಲರು ನನ್ನ ಬಗ್ಗೆ ನೀಡಿರುವ ಪಕ್ಷಪಾತ ಧೋರಣೆಯ ಬಗ್ಗೆಯೂ ವಿವರಿಸಿಲಾಗಿದೆ. ರಾಜ್ಯಪಾಲರ ನಿರ್ಣಯದ ವಿರುದ್ಧ ನಾನು ಈಗಾಗಲೇ ನ್ಯಾಯಲಯದ ಮೊರ ಹೋಗಿದ್ದೇನೆ. ನ್ಯಾಯ ವ್ಯವಸ್ಥೆ ಮೇಲೆ, ಈ ನೆಲದ ಕಾನೂನಿನ ಮೇಲೆ ನನಗೆ ನಂಬಿಕೆ ಇದೆ. ರಾಜ್ಯಪಾಲರು ತೆಗೆದುಕೊಂಡಿರುವ ನಿರ್ಣಯ ಅಸಂವಿಧಾನಿಕ ಹಾಗೂ ಕಾನೂನು ಬಾಹಿರವಾಗಿದೆ.
ನ್ಯಾಯಾಲಯದಲ್ಲಿ ನ್ಯಾಯ ಸಿಗುವ ಭರವಸೆ ನನಗಿದೆ. ನನ್ನ ಬೆಂಬಲಕ್ಕೆ ನಿಂತಿರುವ ಪಕ್ಷದ ಹೈಕಮಾಂಡ್ ಗೆ ನಾನು ಮತ್ತೊಮ್ಮೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ ಪರವಾಗಿ ಹೈಕಮಾಂಡ್ ನಾಯಕರು ನಿಂತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ನಾವಿದ್ದೇವೆ ಅಂತ ರಣದೀಪ್ ಸಿಂಗ್ ಸುರ್ಜೆವಾಲ್ ತಿಳಿಸಿದ್ದರು.