Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ತೊರೆದ ಮುದ್ದಹನುಮೇಗೌಡ : ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡರಾ..?

Facebook
Twitter
Telegram
WhatsApp

ಬೆಂಗಳೂರು: ಇತ್ತಿಚೆಗಂತು ಕಾಂಗ್ರೆಸ್ ತೊರೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಶಾಕಿಂಗ್ ಎನಿಸುವಂತೆ ಮುದ್ದಹನುಮೇಗೌಡ ಕಾಂಗ್ರೆಸ್ ತೊರೆದಿದ್ದಾರೆ. ಬಹಳ ವರ್ಷಗಳಿಂದಲೂ ಮುದ್ದಹನುಮೇಗೌಡ ಅವರು ಕಾಂಗ್ರೆಸ್ ನಿಂದ ಗುರುತಿಸಿಕೊಂಡವರು. ತುಮಕೂರಿನಲ್ಲಿ ಅವರದ್ದೇ ಆದ ಬೆಂಬಲಿಗರ ಬಳಗವಿದೆ. ಕಾರ್ಯಕರ್ತರಿದ್ದಾರೆ. ಇದೀಗ ಮುದ್ದಹನುಮೇಗೌಡ ಕಾಂಗ್ರೆಸ್ ತೊರೆದಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.

ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ‌ ಮಾಡಿರುವ ಮಾಜಿ ಸಂಸದ, ಹಿರಿಯ ನಾಯಕ ಮುದ್ದಹನುಮೇಗೌಡ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ನ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಚಟುವಟಿಕೆಗಳ ಬಗ್ಗೆ ಮುದ್ದಹನುಮೇಗೌಡ ಅವರು ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೂ ಪತ್ರ ಬರೆದಿದ್ದು, ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ಅಂಗೀಕರಿಸಿ ಎಂಸು ಪತ್ರದಲ್ಲಿ ಮನವಿ ಮಾಡಿದ್ದಾರೆ.

ತುಮಕೂರಿನಲ್ಲಿ ಗುರುತಿಸಿಕೊಂಡಿರುವ ಮುದ್ದಹನುಮೇಗೌಡ ಅವರು ವಿಧಾನಸಭೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ನೀಡಲು ಕೆಪಿಸಿಸಿ ಅಧ್ಯಕ್ಷರು ನಿರಾಕರಿಸಿದ್ದರು ಎನ್ನಲಾಗಿದೆ. ಇದೇ ವಿಚಾರಕ್ಕೆ ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಬಿಡುವ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಕ್ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!