ಶಿವಮೊಗ್ಗ: ಮಾಜಿ ಸಂಸದ ಮುದ್ದಹನುಮೇಗೌಡ ಅವರು ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದಿದ್ದರು. ತಮ್ಮ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಆ ಕ್ಷಣದಲ್ಲಿ ಅವರ ಮುಂದಿನ ನಡೆ ಏನು ಎಂಬುದನ್ನು ಯಾರು ಊಹಿಸಿರಲಿಲ್ಲ. ಇದೊಇಗ ಬಹಳ ಬೇಗ ಆ ನಡೆ ಬಗ್ಗೆ ಸ್ಪಷ್ಟ ಉತ್ತರ ಸಿಕ್ಕಿದೆ.
ಇಂದು ಶಿವಮೊಗ್ಗದಲ್ಲಿ ಮಾತನಾಡುತ್ತಾ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಮುದ್ದಹನುಮೇಗೌಡ ಅವರ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ಮುದ್ದಹನುಮೇಗೌಡ ಅವರು ಈಗಾಗಲೇ ನನ್ನನ್ನು ಸಂಪರ್ಕಿಸಿದ್ದಾರೆ. ಬಿಜೆಪಿಗೆ ಬರುವುದು ಖಚಿತವಾಗಿದ. ಅಷ್ಟೆ ಅಲ್ಲ ಅವರ ಜೊತೆಗೆ ಇನ್ನಷ್ಟು ಜನ ಬರಲಿದ್ದಾರೆ ಎಂದು ಹೇಳಿದ್ದಾರೆ. ಈ ವಿಚಾರ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಹುಟ್ಟು ಹಾಕಿದೆ.
ಮಾಜಿ ಸಂಸದ ಮುದ್ದಹನುಮೇಗೌಡ ವಿಧಾನಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕೆಪಿಸಿಸಿ ಅಧ್ಯಕ್ಷರಿಂದ ಅದಕ್ಕೆ ಉತ್ತಮವಾದ ಪ್ರತಿಕ್ರಿಯೆ ಬಾರದ ಹಿನ್ನೆಲೆ ಬೇಸತ್ತಿದ್ದರು ಎನ್ನಲಾಗಿದೆ. ಹೀಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್ ನಿಂದ ಹೊರ ಬಂದಿದ್ದರು. ಇದೀಗ ಬಿಜೆಪಿ ಸೇರುವ ತಯಾರಿ ಮಾಡಿಕೊಂಡಿದ್ದಾರೆ.