Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಕುಂದ ರಾಮಸ್ವಾಮಿ ಬರ್ತ್‌ಡೇ ಸ್ಪೆಷಲ್: ಧೂಳೆಬ್ಬಿಸುತ್ತಿದೆ ‘ಲವ್ ಸೀಸನ್ಸ್’ ಟ್ರೈಲರ್!

---Advertisement---

ಸ್ಯಾಂಡಲ್‌ವುಡ್‌ಗೆ ಮತ್ತೊಂದು ಭರವಸೆಯ ಹೊಸ ಅಲೆ ಎಂಟ್ರಿ ಕೊಡಲು ರೆಡಿಯಾಗಿದೆ. ಎನ್.ಆರ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಮೂಡಿಬಂದಿರುವ, ಕೃತ್ವಿಕ್ ನಿರ್ದೇಶನದ ‘ಲವ್ ಸೀಸನ್ಸ್’ ಸಿನಿಮಾದ ಬಿಗ್ ಅಪ್‌ಡೇಟ್ ಒಂದು ಹೊರಬಿದ್ದಿದೆ. ಚಿತ್ರದ ನಾಯಕ ಮುಕುಂದ ರಾಮಸ್ವಾಮಿ ಅವರ ಹುಟ್ಟುಹಬ್ಬದ ಸಂಭ್ರಮಕ್ಕೆ ಚಿತ್ರತಂಡವು ಧಮಾಕಾ ಟ್ರೈಲರ್ ರಿಲೀಸ್ ಮಾಡುವ ಮೂಲಕ ಸೂಪರ್ ಗಿಫ್ಟ್ ನೀಡಿದೆ.

ಇತ್ತೀಚೆಗೆ ನಡೆದ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಸ್ಯಾಂಡಲ್‌ವುಡ್‌ನ ಪ್ರಮುಖ ಗಣ್ಯರಾದ ಮಂಡ್ಯ ರಮೇಶ್, ಜಯತೀರ್ಥ ಸೇರಿದಂತೆ ಇಡೀ ಚಿತ್ರತಂಡ ಭಾಗವಹಿಸಿತ್ತು. ಈ ವೇಳೆ ಮಾತನಾಡಿದ ಮಂಡ್ಯ ರಮೇಶ್ ಹಾಗೂ ಜಯತೀರ್ಥ ಅವರು, ಸಿನಿಮಾದಲ್ಲಿ ರಂಗಭೂಮಿ ಪ್ರತಿಭೆಗಳೇ ಹೆಚ್ಚಾಗಿರುವುದರಿಂದ ಚಿತ್ರದಲ್ಲಿ ಶಿಸ್ತು ಮತ್ತು ಬದ್ಧತೆ ಎದ್ದು ಕಾಣುತ್ತಿದೆ ಎಂದು ಶ್ಲಾಘಿಸಿದರು. ಹೊಸಬರ ಈ ಸುಂದರ ಪ್ರಯತ್ನಕ್ಕೆ ಕನ್ನಡಿಗರು ಬೆಂಬಲ ನೀಡಬೇಕೆಂದು ಅವರು ಮನವಿ ಮಾಡಿಕೊಂಡರು.

ಜುಲೈ 3ಕ್ಕೆ ರಾಜ್ಯಾದ್ಯಂತ ಅದ್ಧೂರಿ ಬಿಡುಗಡೆ
ಈಗಾಗಲೇ ಸಿನಿಮಾದ ಮೂರು ಸಾಂಗ್ಸ್‌ ಸೂಪರ್ ಹಿಟ್ ಆಗಿದ್ದು, ಪ್ರೇಕ್ಷಕರಲ್ಲಿ ಭಾರಿ ಕ್ರೇಜ್ ಸೃಷ್ಟಿಸಿವೆ. ಹಾಡುಗಳ ಯಶಸ್ಸಿನ ಬೆನ್ನಲ್ಲೇ ಬಂದಿರುವ ಈ ಟ್ರೈಲರ್, ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಎಲ್ಲಾ ಅಂದುಕೊಂಡಂತೆ ನಡೆದರೆ, ಇದೇ ಜುಲೈ 3ರಂದು ‘ಲವ್ ಸೀಸನ್ಸ್’ ರಾಜ್ಯಾದ್ಯಂತ ಥಿಯೇಟರ್‌ಗಳಲ್ಲಿ ಧೂಳೆಬ್ಬಿಸಲು ಸಜ್ಜಾಗಿದೆ.

ಭರ್ಜರಿ ತಾರಾಗಣ ಹಾಗೂ ತಾಂತ್ರಿಕ ಶ್ರೀಮಂತಿಕೆ
ಎನ್.ಆರ್ ಮಂಜುನಾಥ (ನೀಲೇರಿ) ಬಂಡವಾಳ ಹೂಡಿರುವ ಈ ಚಿತ್ರಕ್ಕೆ ವೀರ್ ಸಮರ್ಥ್ ಅವರ ಸಂಗೀತ ನಿರ್ದೇಶನವಿದೆ. ಕೆ.ಕಲ್ಯಾಣ್ ಹಾಗೂ ಪ್ರಮೋದ್ ಮರವಂತೆ ಅವರ ಸಾಹಿತ್ಯ ಪ್ರತಿಯೊಬ್ಬರ ಮನಗೆದ್ದಿದೆ. ಅವಿನಾಶ ಶಾಸ್ತ್ರಿ ಅವರ ಛಾಯಾಗ್ರಹಣ, ಮಧು ತುಂಬಾಕೆರೆ ಸಂಕಲನ ಹಾಗೂ ಭಜರಂಗಿ ಮೋಹನ್ ಅವರ ನೃತ್ಯ ಸಂಯೋಜನೆ ಚಿತ್ರಕ್ಕಿದೆ.

ನಾಯಕ ಮುಕುಂದ ರಾಮಸ್ವಾಮಿ ಅವರಿಗೆ ಜೋಡಿಯಾಗಿ ದಿಯಾ ಕೀರ್ತಿ, ಚಂದನಾ ಗೌಡ ಮತ್ತು ಶ್ವೇತಾ ಕೊಗ್ಲೂರು ಕಾಣಿಸಿಕೊಂಡಿದ್ದಾರೆ. ಉಳಿದಂತೆ ರಾಜೇಶ್ ನಟರಂಗ, ಸಂಗೀತಾ ಅನಿಲ್, ಚೇತನ್ ದುರ್ಗ, ಕಾಮಿಡಿ ಕಿಲಾಡಿ ಸದಾನಂದ, ಹುಲಿ ಕಾರ್ತಿಕ್ ಹಾಗೂ ಬೇಬಿ ರಿತು ಸಿಂಗ್ ಅವರಂತಹ ದಂಡೇ ಚಿತ್ರದಲ್ಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now