ನವದೆಹಲಿ : ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ (82) ಅವರು ಗುರುಗ್ರಾಮ್ನ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ಶುಕ್ರವಾರ ತಿಳಿಸಿದ್ದಾರೆ. ಅವರಿಗೆ ಜೀವರಕ್ಷಕ ಔಷಧಗಳನ್ನು ನೀಡಲಾಗುತ್ತಿದೆ ಎಂದು ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಿದೆ.
ಅವರನ್ನು ಅನುಭವಿ ತಜ್ಞರ ತಂಡದಿಂದ ಗುರುಗ್ರಾಮ್ನ ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಆಸ್ಪತ್ರೆ ತಿಳಿಸಿದೆ.
मेदांता अस्पताल ने जारी किया आदरणीय नेताजी का हेल्थ बुलेटिन: pic.twitter.com/SLZYpXCbdR
— Samajwadi Party (@samajwadiparty) October 7, 2022
ಆಸ್ಪತ್ರೆಯ ಹೆಲ್ತ್ ಬುಲೆಟಿನ್ ಅನ್ನು ಸಮಾಜವಾದಿ ಪಕ್ಷದ ಅಧಿಕೃತ ಟ್ವಿಟರ್ನಲ್ಲಿ ಹಂಚಿಕೊಂಡಿದೆ. ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಕಳೆದ ಭಾನುವಾರ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಯಿತು.