ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಈ ಬಾರಿಯ ಐಪಿಎಲ್ ಆರಂಭವಾದಾಗಿನಿಂದ ಮೂರು ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ ಹೀನಾಯವಾಗಿ ಸೋಲು ಕಂಡಿದೆ. ಈ ಭಾನುವಾರ ತನ್ನ ನೆಲದಲ್ಲಿಯೇ ಮ್ಯಾಚ್ ಎದುರಿಸಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ ಎದುರು ಸೆಣೆಸಾಡಲಿವೆ. ಈ ಪಂದ್ಯವನ್ನಾದರೂ ಗೆಲ್ಲಲೇಬೇಕೆಂದು ಸಖತ್ ಪ್ರಾಕ್ಟೀಸ್ ಮಾಡುತ್ತಿದೆ ಮುಂಬೈ ಇಂಡಿಯನ್ಸ್ ತಂಡ. ಇದೀಗ ತಂಡಕ್ಕೆ ಸ್ಟಾರ್ ಬ್ಯಾಟರ್ ಎಂಟ್ರಿಯಾಗಿದೆ ಎನ್ನುತ್ತಿವೆ ಮೂಲಗಳು.
ಮುಂಬೈ ಇಂಡಿಯನ್ಸ್ ತಂಡಕ್ಕೆ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಬಂದಿದ್ದಾರೆ ಎನ್ನಲಾಗಿದೆ. ಸ್ಟಾರ್ ಬ್ಯಾಟರ್ ಎಂಟ್ರಿಯಿಂದ ಮುಂಬೈ ಇಂಡಿಯನ್ಸ್ ಟೀಂ ನಾಯಕ ಹಾರ್ದಿಕ್ ಪಾಂಡ್ಯಾಗೆ ಬಲ ಬಂದಂತೆ ಆಗಿದೆ. ಮುಂಬೈ ಇಂಡಿಯನ್ಸ್ ಸದ್ಯ ಸೋತಿರುವ ಮೂರು ಪಂದ್ಯದಲ್ಲೂ ಸೂರ್ಯಕುಮಾರ್ ಆಡಿರಲಿಲ್ಲ. ಈಗ ಡೆಲ್ಲಿ ವಿರುದ್ಧ ಆಡಲು ಬರುತ್ತಿದ್ದು, ಈ ಬಾರಿ ಗೆಲುವು ಖಂಡಿತ ಸಿಗಲಿದೆ ಎಂಬ ವಿಶ್ವಾದಲ್ಲಿದೆ ಎಂಐ.
ಸದ್ಯ ಡೆಲ್ಲಿ ವಿರುದ್ಧ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಗೆ ಆರು ದಿನಗಳ ಬಿಡುವು ದೊರೆತಿದ್ದು, ಇಡೀ ತಂಡ ಗುಜರಾತ್ನ ಜಾಮ್‌ನಗರಕ್ಕೆ ಸಣ್ಣ ಪ್ರವಾಸ ತೆರಳಿದೆ. ಪ್ರವಾಸದ ಸಂದರ್ಭ ನಾಯಕ ಹಾರ್ದಿಕ್ ಪಾಂಡ್ಯ, ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಇತರ ಆಟಗಾರರು ಮೋಜು ಮಸ್ತಿ ನಡೆಸುತ್ತಿರುವ ವಿಡಿಯೋವನ್ನು ಮುಂಬೈ ಇಂಡಿಯನ್ಸ್ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಅದೀಗ ವೈರಲ್ ಆಗುತ್ತಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್