26/11 ದಾಳಿಯಂತೆ ಮತ್ತೊಂದು ದಾಳಿ ಮಾಡುವುದಾಗಿ ಅಪರಿಚಿತ ವ್ಯಕ್ತಿಯ ಬೆದರಿಕೆ..!

ಮುಂಬೈ ದಾಳಿಯನ್ನ ಇಂದಿಗೂ ಯಾರು ಮರೆಯುವುದಕ್ಕೆ ಸಾಧ್ಯವಿಲ್ಲದ ಕರಾಳ ದಿನವದು. 2008ರ ನವೆಂಬರ್ 26ರಂದು ನಡೆದ ಮುಂಬೈ ದಾಳಿಯಲ್ಲಿ 166 ಜನ ಸಾವಿಗೆ ಈಡಾಗಿದ್ದರು. ಈಗ ಮುಂಬೈ ಪೊಲೀಸರಿಗೆ ಅಪರಿಚಿತ ವ್ಯಕ್ತಿಯೊಬ್ಬ ಅದೇ ಮಾದರಿಯ ದಾಳಿ ಮಾಡುವುದಾಗಿ ಬೆದರಿಕೆವೊಡ್ಡಿದ್ದಾನೆ.

ಟ್ರಾಫಿಕ್ ಕಂಟ್ರೋಲ್ ರೂಮ್ ಗೆ ಕರೆ ಮಾಡಿ, ಉರ್ದುವಿನಲ್ಲಿ ಮಾತನಾಡಿದ ವ್ಯಕ್ತಿ, ಸೀಮಾ ಹೈದರ್ ಹಿಂತಿರಿಗದೆ ಹೋದಲ್ಲಿ ಭಾರತ ನಾಶವಾಗುತ್ತದೆ ಎಂದು ಎಚ್ಚರಿಸಿದ್ದಾನೆ. ಜೊತೆಗೆ ದಾಳಿ ನಡೆದರೆ ಅದಕ್ಕೆ ಉತ್ತರ ಪ್ರದೇಶ ಸರ್ಕಾರವೇ ಹೊಣೆಯಾಗಲಿದೆ ಎಂದಿದ್ದಾನೆ.

ಮುಂಬೈ ಪೊಲೀಸ್  ಟ್ರಾಫಿಕ್ ಕಂಟ್ರೋಲ್ ರೂಂಗೆ ಜುಲೈ 12 ರಂದು ಈ ಕರೆ ಬಂದಿದೆ. ಮುಂಬೈ ಪೊಲೀಸರು ಮತ್ತು ಕ್ರೈಂ ಬ್ರಾಂಚ್ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆದರೆ, ಹಿರಿಯ ಅಧಿಕಾರಿಯೊಬ್ಬರು ಇದೊಂದು ಹುಸಿ ಕರೆ. ಯಾರು ಮಾಡಿದ್ದಾರೆಂಬುದನ್ನು ಪತ್ತೆ ಹಚ್ಚುತ್ತಿದ್ದೇವೆ ಎಂದಿದ್ದಾರೆ.

ಇನ್ನು ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ ಸೂಕ್ತ ದಾಖಲೆಗಳಿಲ್ಲದೆ ಗ್ರೇಟರ್ ನೋಯ್ಡಾದಲ್ಲಿ ತಂಗಿದ್ದಕ್ಕಾಗಿ ಈ ತಿಂಗಳ ಆರಂಭದಲ್ಲಿ ಆಕೆಯನ್ನು ಬಂಧಿಸಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *