ಮುಂಬೈ ದಾಳಿಯನ್ನ ಇಂದಿಗೂ ಯಾರು ಮರೆಯುವುದಕ್ಕೆ ಸಾಧ್ಯವಿಲ್ಲದ ಕರಾಳ ದಿನವದು. 2008ರ ನವೆಂಬರ್ 26ರಂದು ನಡೆದ ಮುಂಬೈ ದಾಳಿಯಲ್ಲಿ 166 ಜನ ಸಾವಿಗೆ ಈಡಾಗಿದ್ದರು. ಈಗ ಮುಂಬೈ ಪೊಲೀಸರಿಗೆ ಅಪರಿಚಿತ ವ್ಯಕ್ತಿಯೊಬ್ಬ ಅದೇ ಮಾದರಿಯ ದಾಳಿ ಮಾಡುವುದಾಗಿ ಬೆದರಿಕೆವೊಡ್ಡಿದ್ದಾನೆ.
ಟ್ರಾಫಿಕ್ ಕಂಟ್ರೋಲ್ ರೂಮ್ ಗೆ ಕರೆ ಮಾಡಿ, ಉರ್ದುವಿನಲ್ಲಿ ಮಾತನಾಡಿದ ವ್ಯಕ್ತಿ, ಸೀಮಾ ಹೈದರ್ ಹಿಂತಿರಿಗದೆ ಹೋದಲ್ಲಿ ಭಾರತ ನಾಶವಾಗುತ್ತದೆ ಎಂದು ಎಚ್ಚರಿಸಿದ್ದಾನೆ. ಜೊತೆಗೆ ದಾಳಿ ನಡೆದರೆ ಅದಕ್ಕೆ ಉತ್ತರ ಪ್ರದೇಶ ಸರ್ಕಾರವೇ ಹೊಣೆಯಾಗಲಿದೆ ಎಂದಿದ್ದಾನೆ.
ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ರೂಂಗೆ ಜುಲೈ 12 ರಂದು ಈ ಕರೆ ಬಂದಿದೆ. ಮುಂಬೈ ಪೊಲೀಸರು ಮತ್ತು ಕ್ರೈಂ ಬ್ರಾಂಚ್ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆದರೆ, ಹಿರಿಯ ಅಧಿಕಾರಿಯೊಬ್ಬರು ಇದೊಂದು ಹುಸಿ ಕರೆ. ಯಾರು ಮಾಡಿದ್ದಾರೆಂಬುದನ್ನು ಪತ್ತೆ ಹಚ್ಚುತ್ತಿದ್ದೇವೆ ಎಂದಿದ್ದಾರೆ.
ಇನ್ನು ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ ಸೂಕ್ತ ದಾಖಲೆಗಳಿಲ್ಲದೆ ಗ್ರೇಟರ್ ನೋಯ್ಡಾದಲ್ಲಿ ತಂಗಿದ್ದಕ್ಕಾಗಿ ಈ ತಿಂಗಳ ಆರಂಭದಲ್ಲಿ ಆಕೆಯನ್ನು ಬಂಧಿಸಲಾಗಿತ್ತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















