Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ನಗರಸಭೆ ಪೌರಾಯುಕ್ತ ಜಿ.ಟಿ.ಹನುಮಂತರಾಜು‌ ನಿಧನ

Facebook
Twitter
Telegram
WhatsApp

 

ಚಿತ್ರದುರ್ಗ, (ನ.30) : ಚಿತ್ರದುರ್ಗ ನಗರಸಭೆಯ ಪೌರಾಯುಕ್ತ ಜಿ.ಟಿ.ಹನುಮಂತರಾಜು‌ (57) ಅನಾರೋಗ್ಯದಿಂದ ಇಂದು ಮಧ್ಯಾಹ್ನ 2:45 ಕ್ಕೆ (ಬುಧವಾರ)  ನಿಧನರಾದರು.

ತಂದೆ ತಾಯಿ, ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಸುಮಾರು ಮೂರು ವರ್ಷಗಳಿಂದ ಚಿತ್ರದುರ್ಗ ನಗರಸಭೆಯ ಪೌರಾಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು.

ನಾಳೆ(ಗುರುವಾರ) ಬೆಳಿಗ್ಗೆ 10 ಗಂಟೆಗಳವರೆಗೂ ನಗರದ ಚಳ್ಳಕೆರೆ ರಸ್ತೆಯ ಶನೈಶ್ಚರ ದೇವಸ್ಥಾನದ ಬಳಿ ಇರುವ ಅವರ ಮನೆಯಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ನಂತರ ಅವರ ಪಾರ್ಥೀವ ಶರೀರವನ್ನು ಜಗಳೂರಿಗೆ ಕೊಂಡೊಯ್ಯಲಾಗುತ್ತದೆ. ಅಂತ್ಯಕ್ರಿಯೆಯನ್ನು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಗರದ ರುದ್ರಭೂಮಿಯಲ್ಲಿ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ, ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ,  ನಗರಸಭೆಯ ಸದಸ್ಯರುಗಳು, ಅಧಿಕಾರಿಗಳು,  ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಅವರ ಅಂತಿಮ ದರ್ಶನ ಪಡೆದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!