ಚಿತ್ರದುರ್ಗ, (ನ.30) : ಚಿತ್ರದುರ್ಗ ನಗರಸಭೆಯ ಪೌರಾಯುಕ್ತ ಜಿ.ಟಿ.ಹನುಮಂತರಾಜು (57) ಅನಾರೋಗ್ಯದಿಂದ ಇಂದು ಮಧ್ಯಾಹ್ನ 2:45 ಕ್ಕೆ (ಬುಧವಾರ) ನಿಧನರಾದರು.
ತಂದೆ ತಾಯಿ, ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಸುಮಾರು ಮೂರು ವರ್ಷಗಳಿಂದ ಚಿತ್ರದುರ್ಗ ನಗರಸಭೆಯ ಪೌರಾಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು.
ನಾಳೆ(ಗುರುವಾರ) ಬೆಳಿಗ್ಗೆ 10 ಗಂಟೆಗಳವರೆಗೂ ನಗರದ ಚಳ್ಳಕೆರೆ ರಸ್ತೆಯ ಶನೈಶ್ಚರ ದೇವಸ್ಥಾನದ ಬಳಿ ಇರುವ ಅವರ ಮನೆಯಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ನಂತರ ಅವರ ಪಾರ್ಥೀವ ಶರೀರವನ್ನು ಜಗಳೂರಿಗೆ ಕೊಂಡೊಯ್ಯಲಾಗುತ್ತದೆ. ಅಂತ್ಯಕ್ರಿಯೆಯನ್ನು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಗರದ ರುದ್ರಭೂಮಿಯಲ್ಲಿ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ, ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ, ನಗರಸಭೆಯ ಸದಸ್ಯರುಗಳು, ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಅವರ ಅಂತಿಮ ದರ್ಶನ ಪಡೆದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…