Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿವಿಧ ಬೇಡಿಕೆ ಈಡೇರಿಸುವಂತೆ ಪೌರ ನೌಕರರ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮೇ. 26 : ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು. ಹೊರಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ವಾಹನ ಚಾಲಕರು, ನೀರು ಸರಬರಾಜು ಸಿಬ್ಬಂದಿಗಳು, ಲೋಡರ್ಸ್, ಗುತ್ತಿಗೆ ಲೆಕ್ಕಿಗರು, ಕ್ಲೀನರ್ ಪೌರಕಾರ್ಮಿಕರು, ಸೂಪರ್ ವೈಸರ್ಸ್, ಕಂಪ್ಯೂಟರ್ ಆಪರೇಟರ್‍ಗಳು, ಜ್ಯೂನಿಯರ್ ಪ್ರೋಗ್ರಾಸ್ ಸಿಬ್ಬಂದಿಗಳನ್ನು ಖಾಯಂ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಪೌರಕಾರ್ಮಿಕರ ಸಂಘದ ವತಿಯಿಂದ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿರುವ ಎಲ್ಲಾ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಸಾಕಷ್ಟು ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಆದರೂ ಕೂಡ ಸರ್ಕಾರ ನಮ್ಮಗಳತ್ತ ಗಮನಹರಿಸದೆ ನಿರ್ಲಕ್ಷ್ಯ ತೋರುತ್ತಿದೆ.ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು ಹಾಗೂ ಕೆ.ಜಿ.ಐ.ಡಿ., ಜಿ.ಪಿ.ಎಫ್., ಜ್ಯೋತಿ ಸಂಜೀವಿನಿ, ಸೇರಿದಂತೆ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯವನ್ನು ಪೌರ ನೌಕರರಿಗೂ ಜಾರಿ ಮಾಡಬೇಕು. ಸುಮಾರು 25-30 ವರ್ಷಗಳಿಂದ ಹೊರಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ವಾಹನ ಚಾಲಕರು, ನೀರು ಸರಬರಾಜು ಸಿಬ್ಬಂದಿಗಳು, ಲೋಡರ್ಸ್, ಗುತ್ತಿಗೆ ಲೆಕ್ಕಿಗರು, ಕ್ಲೀನರ್ ಪೌರಕಾರ್ಮಿಕರು, ಸೂಪರ್ ವೈಸರ್ಸ್, ಕಂಪ್ಯೂಟರ್ ಆಪರೇಟರ್‍ಗಳು, ಜ್ಯೂನಿಯರ್ ಪ್ರೋಗ್ರಾಸ್ ಸಿಬ್ಬಂದಿಗಳನ್ನು ಖಾಯಂ ಮಾಡಬೇಕು. 2022-23ನೇ ಸಾಲಿನಲ್ಲಿ ಪೌರಕಾರ್ಮಿಕರ ವಿಶೇಷ ನೇಮಕಾತಿಯಡಿ ಪೌರಕಾರ್ಮಿಕರು ನೇಮಕಾತಿ ಹೊಂದಿದ್ದು, ನೌಕರರಿಗೆ ಸರ್ಕಾರವು ನಗರ ಸ್ಥಳೀಯ ಸಂಸ್ಥೆಯ ಸ್ಥಳೀಯ ನಿಧಿಯಿಂದ ವೇತನ ಪಡೆಯಲು ಆದೇಶಿಸಲಾಗಿದ್ದನ್ನು ರದ್ದುಪಡಿಸಿ, ಎಸ್.ಎಫ್.ಸಿ ಅನುದಾನದಡಿ ವೇತನವನ್ನು ನೀಡಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ತೋಳಿಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು.

ಚಿತ್ರದುರ್ಗ ನಗರಸಭೆಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಪ್ರತಿಭಟನೆಯನ್ನು ನಡೆಸಿದ ಪೌರ ಕಾರ್ಮಿಕರು ದಾರಿಯುದ್ದಕ್ಕೂ ಬೇಡಿಕೆ ಈಡೇರಿಕೆಗಾಗಿ ಘೋಷಣೆಗಳನ್ನು ಕೂಗಲಾಯಿತು. ತಮ್ಮ ಬೇಡಿಕೆ ಈಡೇರಿಕೆಗಾಗಿ ಕಳೆದ ಒಂದು ತಿಂಗಳಿಂದ ಕಚೇರಿಯಲ್ಲಿ ಕಪ್ಪು ಪಟ್ಟಿಯನ್ನು ಧರಿಸಿ ಕೆಲಸವನ್ನು ಮಾಡುವುದರ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದರು. ಇದಾದ ನಂತರ ಜಿಲ್ಲಾ ರಕ್ಷಣಾಧಿಕಾರಿಗಳು, ನಗರಸಭೆಯ ಅಧ್ಯಕ್ಷರು, ಪೌರಾಯುಕ್ತರಿಗೆ ಮನವಿ ಸಲ್ಲಿಸಿ ನಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಪೌರಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಡಿ.ದುರುಗೇಶ, ಸಿ.ರೇಣುಕಾ, ರಾಜಣ್ಣ, ಎಸ್.ಪಿ.ಲವ ಸೇರಿದಂತೆ ಸುಮಾರು 300 ಕ್ಕೂ ಹೆಚ್ಚು ಪೌರಕಾರ್ಮಿಕರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...